ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ (ಕೆಕೆಆರ್‌ಟಿಸಿ) ತನಿಖಾ ತಂಡಗಳು ನಡೆಸಿದ ವಿಶೇಷ ತಪಾಸಣಾ ಕಾರ್ಯಾಚರಣೆಯಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ 4,344 ಪ್ರಯಾಣಿಕರಿಂದ ಒಟ್ಟು ₹10,14,614 ದಂಡ ವಸೂಲಿ ಮಾಡಲಾಗಿದೆ ಎಂದು ನಿಗಮದ ಕಲಬುರಗಿ ಕೇಂದ್ರ ಕಚೇರಿಯ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಗಮದ ಆದಾಯ ಸೋರಿಕೆಯನ್ನು ತಡೆಗಟ್ಟುವ ಉದ್ದೇಶದಿಂದ 2026ರ ಜುಲೈನಿಂದ ಅಕ್ಟೋಬರ್‌ವರೆಗೆ ತನಿಖಾ ತಂಡಗಳು ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಿವೆ. ಈ ಅವಧಿಯಲ್ಲಿ ರಾಜ್ಯ ಹಾಗೂ ನೆರೆಯ ರಾಜ್ಯಗಳಲ್ಲಿ ಸಂಚರಿಸುವ ನಿಗಮದ ವ್ಯಾಪ್ತಿಯ ಒಟ್ಟು 66,762 ಬಸ್‌ಗಳನ್ನು ತಪಾಸಣೆ ಮಾಡಲಾಗಿದೆ.
ತಪಾಸಣೆಯ ಸಂದರ್ಭದಲ್ಲಿ ಒಟ್ಟು 5,459 ಪ್ರಕರಣಗಳನ್ನು ಪತ್ತೆಹಚ್ಚಲಾಗಿದ್ದು, ನಿಗಮದ ಆದಾಯ ಸೋರಿಕೆಯಾಗುತ್ತಿದ್ದ ₹2,52,335 ಮೊತ್ತವನ್ನು ಪತ್ತೆಹಚ್ಚಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಪ್ರಯಾಣಿಕರು ದಂಡಕ್ಕೆ ಒಳಗಾಗುವುದನ್ನು ತಪ್ಪಿಸಲು ಬಸ್‌ಗಳಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಸರಿಯಾದ ಟಿಕೆಟ್ ಅಥವಾ ಪಾಸ್ ಪಡೆದುಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ಮನವಿ ಮಾಡಿದೆ.


