ಕಲಬುರಗಿ: ಆಳಂದ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ-05 ಮತ್ತು ಸಹಾಯಕಿಯರ-25 ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ ಎಂದು ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ತಿಳಿಸಿದಾರೆ.
ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳನ್ನು ಸಲ್ಲಿಸಲು ಇಚ್ಚಿಸುವವರು 2025ರ ಮೇ 17 ರೊಳಗಾಗಿ ಕಚೇರಿ ಸಮಯದಲ್ಲಿ ಮಧ್ಯಾಹ್ನ 1.30 ಗಂಟೆಯೊಳಗಾಗಿ ಸಂಭಂದಪಟ್ಟ ದಾಖಲಾತಿಗಳೊಂದಿಗೆ ಆಳಂದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಆಕ್ಷೇಪಣೆ ಸಲ್ಲಿಸಬೇಕೆಂದು ಅವರು ತಿಳಿಸಿದ್ದಾರೆ.