ಕಲಬುರಗಿ / ಬೆಂಗಳೂರು : ವಕೀಲೆ , ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್ ಅವರಿಗೆ 2025ನೇ ಸಾಲಿನ ಬೂಕರ್ ಪ್ರಶಸ್ತಿ ದೊರಕಿದೆ. ಬಾನು ಮುಷ್ತಾಕ್ ಅವರು ಬರೆದಿರುವ ‘ಹಸೀನಾ ಮತ್ತು ಇತರ ಕತೆಗಳು’ ಕಥಾಸಂಕಲನದ ಇಂಗ್ಲಿಷ್ ಅನುವಾದಿತ ‘ಹಾರ್ಟ್ ಲ್ಯಾಂಪ್’ ಕೃತಿಯು ಇಂಟರ್ ನ್ಯಾಷನಲ್ ಬೂಕರ್ ಪ್ರಶಸ್ತಿಗೆ ಆಯ್ಕೆಯಾಗಿದೆ ಎಂದು ಪ್ರಶಸ್ತಿ ಆಯ್ಕೆಯ ಸಮಿತಿಯು ಲಂಡನ್ ನಲ್ಲಿ ಘೋಷಿಸಿದೆ.
ಈ ಪ್ರಶಸ್ತಿ ವಿಜೇತರಿಗೆ 50,000 ಪೌಂಡ್ ಬಹುಮಾನ ಸಿಗಲಿದ್ದು, ಇದನ್ನು ಲೇಖಕರು ಮತ್ತು ಅನುವಾದಕರ ನಡುವೆ ಹಂಚಲಾಗುತ್ತದೆ. ಅಂತಿಮ ಹಂತದಲ್ಲಿ ಆಯ್ಕೆಯಾಗಿದ್ದ ಲೇಖಕರನ್ನು ಲಂಡನ್ ನಲ್ಲಿ ನಡೆದ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು.
ಕನ್ನಡ ಲೇಖಕಿ ಬಾನು ಮುಷ್ತಾಕ್‌ರ ಈ ಕಥಾ ಸಂಕಲನವನ್ನು ದೀಪಾ ಭಸ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ‘ಹಾರ್ಟ್ ಲ್ಯಾಂಪ್ʼ ಕಳೆದ ವರ್ಷ ಪೆನ್ ಟ್ರಾನ್ಸ್‌ಲೇಟ್ಸ್ ಪ್ರಶಸ್ತಿಯನ್ನೂ ಪಡೆದಿತ್ತು. ಅಂತಿಮ ಹಂತದಲ್ಲಿದ್ದ ಆರು ಇಂಗ್ಲಿಷ್ ಅನುವಾದಿತ ಕೃತಿಗಳಲ್ಲಿ ಎರಡು ಫ್ರೆಂಚ್ ಮತ್ತು ಡ್ಯಾನಿಶ್, ಇಟಾಲಿಯನ್, ಕನ್ನಡ ಮತ್ತು ಜಪಾನೀ ಭಾಷೆಯ ತಲಾ ಒಂದು ಕೃತಿಗಳಿದ್ದವು. ಇದೀಗ ಕನ್ನಡ ಅನುವಾದಿತ ಕೃತಿಗೆ ಬೂಕರ್ ಪ್ರಶಸ್ತಿ ಸಂದಿರುವುದಕ್ಕೆ ಬಾನು ಅವರಿಗೆ ಕನ್ನಡದ ಖ್ಯಾತ ಗಣ್ಯರು ಅಭಿನಂದಿಸುತ್ತಿದ್ದಾರೆ.
ಪ್ರಶಸ್ತಿಯ ಅಂತಿಮ ಘಟ್ಟಕ್ಕೆ ಆರು ಕೃತಿಗಳು ತಲುಪಿದ್ದವು. ಅವುಗಳ ಪೈಕಿ ಬಾನು ಮುಷ್ತಾಕ್ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿರುವುದು ಕನ್ನಡ ಸಾಹಿತ್ಯಕ್ಕೆ ವಿಶ್ವ ವೇದಿಕೆಯಲ್ಲಿ ಮಹತ್ವದ ಸ್ಥಾನ ದೊರೆತಂತಾಗಿದೆ. ʼಹಾರ್ಟ್ ಲ್ಯಾಂಪ್ʼ ಕೃತಿ ಈ ಹಿಂದೆ ಲಾಂಗ್ ಲಿಸ್ಟ್‌ಗೆ ಆಯ್ಕೆಯಾಗಿತ್ತು. ಬಾನು ಮುಷ್ತಾಕ್‌ರ ಈ ಕಥಾ ಸಂಕಲನವನ್ನು ದೀಪಾ ಭಸ್ತಿ ಇಂಗ್ಲಿಷ್‌ಗೆ ಅನುವಾದಿಸಿದ್ದಾರೆ. ʼಹಾರ್ಟ್ ಲ್ಯಾಂಪ್ʼ ಕಳೆದ ವರ್ಷ ಪೆನ್ ಟ್ರಾನ್ಸ್‌ಲೇಟ್ಸ್ ಪ್ರಶಸ್ತಿಯನ್ನೂ ಪಡೆದಿತ್ತು. ಅಂತಿಮ ಹಂತದಲ್ಲಿದ್ದ ಆರು ಇಂಗ್ಲಿಷ್ ಅನುವಾದಿತ ಕೃತಿಗಳಲ್ಲಿ ಎರಡು ಫ್ರೆಂಚ್ ಮತ್ತು ಡ್ಯಾನಿಶ್, ಇಟಾಲಿಯನ್, ಕನ್ನಡ ಮತ್ತು ಜಪಾನೀ ಭಾಷೆಯ ತಲಾ ಒಂದು ಕೃತಿಗಳಿದ್ದವು.