ಕಲಬುರಗಿ| ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದ ಮಹಾನಗರ ಪಾಲಿಕೆ ವಿರುದ್ಧ ಜೆಪಿ ಸಂಘಟನೆ ಪ್ರತಿಭಟನೆ 

Date:

Share post:

ಕಲಬುರಗಿ: ನಗರದಲ್ಲಿ ತಲೆ ಎತ್ತಿರುವ ಅಕ್ರಮ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳದೇ ಕಾಲ ಹರಣ ಮಾಡುತ್ತಿರುವ ಕಲಬುರಗಿಯ ಪಾಲಿಕೆ ಆಯುಕ್ತರು, ಮೇಯರ್ ಮತ್ತು ಶಾಸಕರ ನೀತಿ ಖಂಡಿಸಿ, ಪಾಲಿಕೆಯ ಕಚೇರಿಯ ಎದುರುಗಡೆ ಜನತಾ ಪರಿವಾರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

 

ನಕಲಿ ಕಟ್ಟಡ ಪರವಾನಗಿಗಳ ಮೇಲೆ ಯಾವುದೇ ಕ್ರಮವಿಲ್ಲ, ಪಾಲಿಕೆಯಲ್ಲಿ ಹೆಚ್ಚುತ್ತಿರುವ ಭ್ರಷ್ಟಾಚಾರ, ಇ ಖಾತಾ (ಎ ಮತ್ತು ಬಿ) ಖಾತಾ ನಡುವಿನ ವ್ಯತ್ಯಾಸದ ಸಮಸ್ಯೆ ಬಗೆ ಹರಿಸದಿರುವುದು, ಹೆಚ್ಚುತ್ತಿರುವ ಬೀದಿ ನಾಯಿಗಳ ದಾಳಿಯ ಕುರಿತು ಕ್ರಮ, ಸರ್ವೀಸ್ ರಸ್ತೆಗಳ ಸಮಸ್ಯೆಗಳು, ಕಾರ್ಪೊರೇಷನ್ ಸಂಕೀರ್ಣದ ಸಮಸ್ಯೆಗಳು, ಅನೈರ್ಮಲ್ಯ ಕುಡಿಯುವ ನೀರಿನ ಸಮಸ್ಯೆ, ಸೇರಿದಂತೆ ಕಸ ವಿಲೇವಾರಿ, ವಿದ್ಯುತ್ ಕಂಬಗಳು, ಒಳಚರಂಡಿ ಮತ್ತು 24/7 ನೀರು ಸರಬರಾಜು ಮಾಡಬೇಕೆಂದು ಸಂಘಟನೆಯ ಪದಾಧಿಕಾರಿಗಳು ಒತ್ತಾಯಿಸಿದರು.

 

ಈ ಸಂದರ್ಭದಲ್ಲಿ ಮಾತನಾಡಿದ ಜನತಾ ಪರಿವಾರ ಸಂಘಟನೆ ಅಧ್ಯಕ್ಷ ಸಿರಾಜ್ ಶಾಬ್ಧಿ, ಪಾಲಿಕೆಯ ಕೆಲವು ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಹಣ ಪಡೆದುಕೊಂಡು ಅಕ್ರಮ ಕಟ್ಟಡಗಳಿಗೆ ಪರವಾನಗಿ ಕೊಡುತ್ತಿದ್ದಾರೆ. ಇಂತಹ ಕೆಲಸಗಳಿಂದಾಗಿ ನಗರ ವಾಸಿಗಳ ನಡುವೆ ಮಾರಣಾಂತಿಕ ಹಲ್ಲೆ ಪ್ರಕರಣಗಳು ನಡೆಯುತ್ತಿವೆ. ಕೂಡಲೇ ಇವುಗಳ ಬಗ್ಗೆ ಎಚ್ಚೆತ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಖಾಲೀದ್ ಅಬ್ರಾರ್, ಶೇಖ್ ಸೈಫನ್, ಆಕಾಶ್ ರಿಡ್ಲಾನ್, ಅಝರ್ ಮುಬಾರಕ್, ಅಝಮತ್ ಉಲ್ ಖಾದ್ರಿ, ಮುಬೀನ್ ಪೆಹಾಲ್ವನ್, ಅಬ್ದುಲ್ ಖದಿರ್, ಬಷೀದ್ ಶೇಖ್, ಶೇಖ್ ಜಾವೀದ್, ಶರಣು, ಸೇರಿದಂತೆ ಹಲವರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...