ಕಲಬುರಗಿ| ಅಕ್ರಮ ಸಂಬಂಧ; ಗಂಡನನ್ನೇ ಕೊಲೆಗೈದ ಪತ್ನಿ

Date:

Share post:

ಕಲಬುರಗಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದು ಎಂಬ ಕಾರಣಕ್ಕೆ ಗೃಹಿಣಿಯೊಬ್ಬಳು ಪ್ರಿಯಕರನ ಜೊತೆಗೂಡಿ ತನ್ನ ಪತಿಯನ್ನೇ ಹತ್ಯೆ ಮಾಡಿರುವ ಘಟನೆ ಗುರುವಾರ ಮಧ್ಯರಾತ್ರಿ ಚಿತ್ತಾಪುರ ತಾಲೂಕಿನ ಭಾಗೋಡಿ ಗ್ರಾಮದಲ್ಲಿ ನಡೆದಿದೆ.

ತಿಪ್ಪಣ್ಣ ಅಲಿಯಾಸ್ ಕುಪೇಂದ್ರ (30) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಬಾರದೆಂದು ಶಾಂತಮ್ಮ ಮತ್ತು ಆಕೆಯ ಪ್ರಿಯಕರ ಸೇರಿ ತಿಪ್ಪಣ್ಣ ಕುಪೇಂದ್ರ ಎನ್ನುವವರನ್ನು ತಲೆದಿಂಬ್ಬಿಂದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸಿ ಕೊಲೆಗೈದಿದ್ದಾರೆ ಎಂದು ತಿಳಿದುಬಂದಿದೆ.

ಶಾಂತಮ್ಮನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಪ್ರಿಯಕರ ಪರಾರಿಯಾಗಿದ್ದು, ಆತನನ್ನು ಕೂಡಲೇ ಬಂಧಿಸಲಾಗುವುದು ಎಂದು ಪಿಎಸ್’ಐ ಶ್ರೀಶೈಲ್ ಅಂಬಾಟಿ ಮಾಹಿತಿ ನೀಡಿದ್ದಾರೆ.

ತಲೆದಿಂಬ್ಬಿಂದ್ದ ಮುಖವನ್ನು ಮುಚ್ಚಿ ಉಸಿರು ಗಟ್ಟಿಸುತ್ತಿರುವಾಗ ತಿಪ್ಪಣ್ಣ ಕುಪೇಂದ್ರ ಎನ್ನುವವರು ಜೋರಾಗಿ ಕಿರುಚಿದ್ದಾರೆ. ಅಕ್ಕ ಪಕ್ಕದವರು ಏನಾಗಿದೆ ಎಂದು ಮನೆಯ ಬಾಗಿಲು ಬಡಿದಾಗ ಬಾಗಿಲು ತೆಗೆಯದಿದ್ದಾಗ ಅನುಮಾನಗೊಂಡು ಕೂಡಲೇ 112 ಗೆ ಕರೆ ಮಾಡಿ ಪೊಲೀಸರನ್ನು ಕರೆಸಿದಾಗ ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಿಯಕರನಾದವನು ಅಟ್ಟದ ಮೇಲಿನ ಕಿಡಕಿಯಿಂದ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.

ಕೊಲೆಯಾದ ವ್ಯಕ್ತಿಯ ಶವವನ್ನು ಚಿತ್ತಾಪುರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಕಳುಹಿಸಗಿದೆ.

ಸುದ್ದಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿಪಿಐಗಳಾದ ನಟರಾಜ ಲಾಡೆ, ಚಂದ್ರಶೇಖರ ತಿಗಡಿ, ಎಎಸ್’ಐ ಲಾಲಹ್ಮದ್, ಸಿಬ್ಬಂದಿಗಳಾದ ದತ್ತು ಜಾನೆ, ರವಿಕುಮಾರ, ಸವಿಕುಮಾರ, ಅನೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಚಿತ್ತಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...