ಕಲಬುರಗಿ: ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ ವಸತಿ ಪದವಿ ಪೂರ್ವ ಕಾಲೇಜು, ಮೊರಾರ್ಜಿ ದೇಸಾಯಿ ವಸತಿ ಶಾಲೆ (ಉನ್ನತ್ತೀಕರಿಸಿದ) ಹಾಗೂ ಮೌಲಾನಾ ಆಜಾದ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರು ಹಾಗೂ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ವಸತಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಸರ್ಕಾರಿ ಮುಸ್ಲಿಂ ವಸತಿ ಶಾಲೆ ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು/ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ. Kalaburag

ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು https://dom.karnataka.gov.in ವೆಬ್‍ಸೈಟ್‍ದಿಂದ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ತಮ್ಮ ವೈಯಕ್ತಿಕ ವಿವರಣೆಯೊಂದಿಗೆ ಎಲ್ಲಾ ಸಂಬಂಧಪಟ್ಟ ಶೈಕ್ಷಣಿಕ ದಾಖಲೆಗಳನ್ನು ದೃಢೀಕರಿಸಿ ಕಲಬುರಗಿ ನಗರದ ನಗರಾಭಿವೃದ್ಧಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿಯಲ್ಲಿ 2025ರ ಮೇ 19 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8277799990 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....