ಕಲಬುರಗಿ| ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಆಹ್ವಾನ

Date:

Share post:

ಕಲಬುರಗಿ: ಪ್ರಸಕ್ತ 2025-26ನೇ ಸಾಲಿಗೆ ಕಲಬುರಗಿ ಜಿಲ್ಲೆಯ 38 ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ವಿವಿಧ ವಿಷಯಗಳ 99 ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಹಾಗೂ ಜಿಲ್ಲೆಯಲ್ಲಿ ಹೊಸದಾಗಿ ಪ್ರಾರಂಭಿಸಲಾದ 07 ಆದರ್ಶ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಒಟ್ಟು 28 ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು (ಪ್ರಾಂಶುಪಾಲರ ಹಂತದಲ್ಲಿ) ನೇಮಕ ಮಾಡಿಕೊಳ್ಳಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಕಲಬುರಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ದಿನಾಂಕ: 25-05-2025ರ ಆದೇಶದನ್ವಯ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆಯಾ ಹುದ್ದೆಗೆ ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆಯನ್ನು ಪರಿಗಣಿಸಿ ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲು ಅನುಮತಿ ನೀಡಲಾಗಿದ್ದು, ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಅವಶ್ಯಕ ದಾಖಲೆಗಳೊಂದಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರಿಗೆ 2025ರ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಪ್ರಾಂಶುಪಾಲರು ಆಯ್ಕೆ ಮಾಡಿದ ಉಪನ್ಯಾಸಕರ ವಿಷಯವಾರು ಪಟ್ಟಿಯನ್ನು ಸಲ್ಲಿಸಲು ಜೂನ್ 17 ಕೊನೆಯ ದಿನವಾಗಿದೆ.

ಅತಿಥಿ ಉಪನ್ಯಾಸಕರ ನೇಮಕಾತಿಯು ಸರ್ಕಾರದ/ ಇಲಾಖೆಯ ಆದೇಶದ ಷರತ್ತುಗಳಿಗೊಳಪಟ್ಟಿರುತ್ತದೆ. ಜಿಲ್ಲೆಯ ಕಾಲೇಜುವಾರು ಖಾಲಿಯಿರುವ ವಿಷಯವಾರು ಶಿಕ್ಷಕರ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮಿನಿವಿಧಾನ ಸೌಧ ಆವರಣದಲ್ಲಿರುವ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...