ಕಲಬುರಗಿ| ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಮಸ್ಯೆಗಳನ್ನು ಬಗೆಹರಿಸುವಂತೆ ಶಶೀಲ್ ನಮೋಶಿ ಒತ್ತಾಯ

Date:

Share post:

ಕಲಬುರಗಿ: ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಿಬ್ಬಂದಿಗಳು ಅನೇಕ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಅಧಿಕಾರಿಗಳು ದಿನಕ್ಕೊಂದು ಆದೇಶ ಹೊರಡಿಸಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ಆತಂಕ ತರುತ್ತಿದ್ದಾರೆ ಇದು ಅವರ ಪಾಠ ಪ್ರವಚನಗಳ ಮೇಲೆ ಹಾಗೂ ಫಲಿತಾಂಶದ ಮೇಲೂ ಕೆಟ್ಟ ಪ್ರಭಾವ ಬೀರುತ್ತಿದೆ. ಆದ್ದರಿಂದ ದಯವಿಟ್ಟು ಅವರ ಕನಿಷ್ಠ ಸಮಸ್ಯೆಗಳನ್ನಾದರು ಬಗೆಹರಿಸಿ ಅವರ ಆತಂಕ ದೂರ ಮಾಡಿ ಫಲಿತಾಂಶ ಹೆಚ್ಚಾಗುವಂತೆ ಕ್ರಮ ವಹಿಸಬೇಕೆಂದು ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಅವರು ಗುರುವಾರ ಬೆಂಗಳೂರಿನಲ್ಲಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ನವರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಿಗೆ 2025-26ನೇ ಸಾಲಿನಿಂದ ಜಾರಿಗೆ ಬರುವಂತೆ ಪ್ರತಿ ಅನುದಾನಿತ ವಿಭಾಗಕ್ಕೆ ಕನಿಷ್ಠ ದಾಖಾಲಾತಿಯನ್ನು 20ಕ್ಕೆ ನಿಗಧಿಪಡಿಸುವದು, ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕಾರ್ಯಭಾರ ಕಡಿಮೆ ಇರುವ ಕಾಲೇಜುಗಳಿಂದ ಸಮೀಪದ ಕಾರ್ಯಭಾರ ಲಭ್ಯವಿರುವ ಕಾಲೇಜುಗಳಿಗೆ ನಿಯೋಜನೆ ಮಾಡುವದು, ಕಾರ್ಯಭಾರ ಕಡಿಮೆಯಿರುವ ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರನ್ನು ಮತ್ತು ಭೋದಕೇತರ ಸಿಬ್ಬಂದಿಗಳಿಗೆ ಕಡ್ಡಾಯ ಸ್ವಯಂ ನಿವೃತ್ತಿ ಆದೇಶ ಹಿಂಪಡೆದು ಕಾರ್ಯಭಾರ ಅಧಿಕವಿರುವ ಸರಕಾರಿ ಪದವಿ ಪೂರ್ವ ಕಾಲೇಜುಗಳಿಗೆ, ಮೋರಾರ್ಜಿ, ಕಿತ್ತೂರು ರಾಣಿ ಚನ್ನಮ್ಮ ಮತ್ತು ಆದರ್ಶ ವಿದ್ಯಾಲಯಗಳಿಗೆ ನಿಯೋಜನೆ ಮಾಡುವುದು, ಸದರಿ ಸಿಬ್ಬಂದಿಗಳಿಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೆ ತರುವ ಮೂಲಕ ಸೇವಾ ಭದ್ರತೆ ನೀಡುವುದು, ಹಾಗೂ ಪ್ರತಿ ತಿಂಗಳು 5ನೇ ತಾರೀಕಿನ ಒಳಗೆ ಕರ್ನಾಟಕ ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳಿಗೆ ವೇತನ ಬಿಡುಗಡೆ ಮಾಡಲು ಕಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಈ ಸಮಸ್ಯೆಗಳ ಬಗ್ಗೆ ಅಧಿಕಾರಿಗಳ ಜೋತೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....