ಕಲಬುರಗಿ| ಎಸ್.ನಿಜಲಿಂಗಪ್ಪ ದಂತ ವೈದ್ಯಕೀಯ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ 

Date:

Share post:

ಕಲಬುರಗಿ: ನಾವೆಲ್ಲರೂ ಪರಿಸರದ ಕೂಸುಗಳು. ಪರಿಸರದ ಉಳಿವಿನ ಹಿಂದೆ ನಮ್ಮೆಲ್ಲರ ಅಳಿವು ಉಳಿವು ಅಡಗಿದೆ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಸ್.ನಿಜಲಿಂಗಪ್ಪ ದಂತ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ ಜಯಶ್ರೀ ಮುದ್ದಾ ಹೇಳಿದರು.

ಅವರು ಕಾಲೇಜಿನ ಪಬ್ಲಿಕ್ ಹೆಲ್ತ್ ಡೆಂಟಿಸರಿ ವಿಭಾಗದ ನೇತೃತ್ವದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ನಿಮಿತ್ತ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ವಿಶ್ವ ಪರಿಸರ ದಿನಾಚರಣೆಯು ಕೆವಲ ಒಂದು ದಿನದ ಆಚರಣೆಗೆ ಸೀಮಿತವಾಗಬಾರದು. ಎಲ್ಲರೂ ಸ್ವಚ್ಛ ಪರಿಸರಕ್ಕೆ ಪಣ ತೊಟ್ಟು ಕೆಲಸ ಮಾಡಬೇಕು ಎಂದರು.

ಯುವಕರು ಹೆಚ್ಚು ಹೆಚ್ಚು ಗಿಡಗಳನ್ನು ಬೆಳೆಸುವ ಮೂಲಕ ಪರಿಸರ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು. ಮಾನವ ಸೇರಿದಂತೆ ಇತರೆ ಪ್ರಾಣಿ, ಪಕ್ಷಿಗಳು, ಸೇರಿದಂತೆ ಪ್ರತಿಯೊಂದು ಜೀವ ಸಂಕುಲ ಆಹಾರ, ಗಾಳಿ, ನೀರು ಇತರೆ ಅಗತ್ಯತೆಗಳಿಗಾಗಿ ಪರಿಸರವನ್ನ ಅವಲಂಭಿಸಿದೆ ಎಂದರೆ ತಪ್ಪಾಗಲಾರದು. ಆದರೆ ಇತ್ತಿಚಿನ ದಿನಗಳಲ್ಲಿ ಮಾನವನು ಆಧುನಿಕ ಬದುಕಿನ ಗೀಳಿಗೆ ಬಿದ್ದು ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಈಗ ಮಾನವನ ಈ ದುರಾಸೆಯಿಂದ ಗಾಳಿ, ನೀರು, ಮಣ್ಣು ಮುಂತಾದ ಪರಿಸರದ ಪ್ರತಿಯೊಂದು ಅಂಶವೂ ಕಲುಷಿತಗೊಂಡಿದೆ. ಮನುಷ್ಯ ತನ್ನ ಅಭಿವೃದ್ಧಿಗಾಗಿ ತನಗೆ ಅರಿವಿಲ್ಲದಂತೆ ಪರಿಸರವನ್ನು ಹಾಳು ಮಾಡುತ್ತಿದ್ದಾನೆ. ಹೀಗಾಗಿ ಪ್ರತಿಯೊಬ್ಬರಲ್ಲೂ ಪರಿಸರದ ಬಗ್ಗೆ ಕಾಳಜಿ ಮೂಡಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಉಪ ಪ್ರಾಚಾರ್ಯರಾದ ಡಾ.ವೀರೆಂದ್ರ ಪಾಟೀಲ್, ವಿಭಾಗದ ಮುಖ್ಯಸ್ಥರಾದ ಡಾ.ನವೀನ್ ಕಾರಬಾರಿ, ಡಾ.ಸುಭಾಷ್ ಪಾಟೀಲ್, ಡಾ.ಸುವರ್ಣ ಬಿರಾದಾರ ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು. ಕಾರ್ಯಕ್ರಮ ಬಳಿಕ ಕಾಲೇಜಿನ ಆವರಣದಲ್ಲಿ ವಿವಿಧ ಬಗೆಯ ಸಸಿಗಳನ್ನು ನೆಡಲಾಯಿತು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....