ಕಲಬುರಗಿ| ಕನ್ನಡ ನಾಡು-ನುಡಿ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಕರ್ತವ್ಯ ಮುಖ್ಯ: ಮಾಲೀಕಯ್ಯಾ ಗುತ್ತೇದಾರ

Date:

Share post:

ಕಲಬುರಗಿ : ಕನ್ನಡ ನಾಡು-ನುಡಿ ಸಂರಕ್ಷಣೆಯಲ್ಲಿ ಪ್ರತಿಯೊಬ್ಬರ ಕರ್ತವ್ಯ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅವರ ಕನ್ನಡದ ಸೇವೆ ಸದಾ ಸ್ಮರಿಸುವಂಥದು ಎಂದು ಮಾಜಿ ಸಚಿವ ಮಾಲೀಕಯ್ಯಾ ವ್ಹಿ. ಗುತ್ತೇದಾರ ಅವರು ಹೇಳಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ನಗರದ ಕನ್ನಡ ಭವನದ ಕಲಾ ಸೌಧದಲ್ಲಿ ಕನ್ನಡೋತ್ಸವದ ಪ್ರಯುಕ್ತ ಜರುಗಿದ ಸಮೂಹ ಚಿತ್ರಕಲಾ ಪ್ರದರ್ಶನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಬುರಗಿ ಜಿಲ್ಲೆಯನ್ನು ಒಂದು ಸಾಂಸ್ಕೃತಿಕ ಜಿಲ್ಲೆಯನ್ನಾಗಿಸುವ ತೇಗಲತಿಪ್ಪಿ ಅವರ ಗುರಿ ಸಾಧನೆಗೆ ಸರ್ವರೂ ಕೈಜೋಡಿಸಬೇಕು. ಕನ್ನಡೋತ್ಸವ ಆಚರಿಸುವ ಮೂಲಕ ನಾಡಿನ ಸಾಂಸ್ಕೃತಿಕ ಮೌಲ್ಯ ಪಸರಿಸಿದಂತಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಪಂ ನ ಮಾಜಿ ಅಧ್ಯಕ್ಷ ಭೀಮರಾವ ಟಿ.ಟಿ. ಮಾತನಾಡಿ, ಕಳೆದ ಮೂರು ವರ್ಷಗಳಿಂದ ಕಲೆ, ಸಾಹಿತ್ಯ, ಸಂಗೀತ ಸೇರಿ ಇನ್ನಿತರ ಕ್ಷೇತ್ರಗಳು ಶ್ರೀಮಂತಗೊಳಿಸುವಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅವಿರತವಾಗಿ ಶ್ರಮಿಸುತ್ತಿದೆ. ಜೀವ ಭಾವ ಒಂದಾಗಿಸಿ ಸರಿದೂಗಿಸಿ ಹಾಕುವ ಹೆಜ್ಜೆ ಗುರುತುಗಳು ನಾಡಿನ ಜನ ಮರೆಯಲಾಗದು. ಈ ಎರಡು ದಿನಗಳ ಕಾಲ ನಡೆಯುತ್ತಿರುವ ಕನ್ನಡೋತ್ಸವವನ್ನು ನೆಲ-ಜಲ ಸಂವರ್ಧನೆ ಸಂಕೇತವಾಗಿ ಆಚರಿಸುವಂತೆ ಹೇಳಿದರು. ಕಲೆ ಅಭಿವ್ಯಕ್ತತೆ ಜೀವ ತುಂಬಿದಾಗ ಸೌಂದರ್ಯ ಭಾವ ಮೂಡುತ್ತದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿ, ಜಾತಿ, ಧರ್ಮಗಳ ಗೋಡೆಗಳಾಚೆ ಬಂಧುತ್ವದ ನೆಲೆಯಲ್ಲಿ ಕನ್ನಡ ಕಟ್ಟುವ ಪ್ರಾಮಾಣಿಕ ಕಾರ್ಯ ಪರಿಷತ್ತು ಮಾಡುತ್ತಿದೆ. ಜಾತ್ಯತೀತ ಮತ್ತು ಧರ್ಮಾತೀತವಾಗಿ ನಿಸ್ವಾರ್ಥ ಮನೋಭಾವನೆಯಿಂದ ಕನ್ನಡಕ್ಕಾಗಿ ಕೆಲಸ ಮಾಡುತ್ತಿದ್ದೇವೆ. ಸರ್ವ ಜನಾಂಗದ ಶಾಂತಿ ತೋಟದಲ್ಲಿ ಕನ್ನಡದ ಕಂಪು ಸೂಸುವಂತೆ ಮಾಡುತ್ತಿರುವ ಕಾರ್ಯಕ್ಕೆ ಜಿಲ್ಲೆಯ ಜನತೆ ಬೆನ್ನೆಲುಬಾಗಿ ನಿಂತು ಪ್ರೋತ್ಸಾಹಿಸುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ವೈದ್ಯ ಚಿಂತಕ ಡಾ. ಸಂಜೀವಕುಮಾರ ಎಂ.ವೈ. ಪಾಟೀಲ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಹಿರಿಯ ಉಪಾಧ್ಯಕ್ಷ ಎಂ.ಬಿ. ಪಾಟೀಲ, ಸಾಹಿತ್ಯ ಪ್ರೇರಕ ಶರಣಗೌಡ ಅಲ್ಲಮಪ್ರಭು ಪಾಟೀಲ, ಕರ್ನಾಟಕ ಲಲಿತಕಲಾ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ. ರೆಹಮಾನ್ ಪಟೇಲ್, ರವೀಂದ್ರಕುಮಾರ ಭಂಟನಳ್ಳಿ, ಶರಣರಾಜ ಛಪ್ಪರಬಂದಿ ಮಾತನಾಡಿದರು. ರಾಜೇಂದ್ರ ಮಾಡಬೂಳ, ಪ್ರಭವ ಪಟ್ಟಣಕರ್ , ಗಣೇಶ ಚಿನ್ನಾಕಾರ, ಬಾಬುರಾವ ಪಾಟೀಲ, ಧರ್ಮರಾಜ ಜವಳಿ, ರಮೇಶ ಬಡಿಗೇರ, ಎಂ.ಎನ್. ಸುಗಂಧಿ, ಶಿವಶರಣ ಹಡಪದ, ಸೈಯದ್ ನಜಿರುದ್ದೀನ್ ಮುತ್ತವಲಿ, ನವಾಬ ಖಾನ್, ಅಮೃತಪ್ಪ ಅಣೂರ ಕವಿ, ಶಿವಾನಮದ ಸುರವಸೆ, ಎಚ್.ಬಿ. ತೀರ್ಥೆ, ವೀರೇಂದ್ರಕುಮಾರ ಕೊಲ್ಲೂರ, ರೇವಣಸಿದ್ದಪ್ಪ ಜೀವಣಗಿ, ಶಿವಲಿಂಗಪ್ಪ ಅಷ್ಟಗಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಜಿಲ್ಲೆಯ 46 ಜನ ಹಿರಿಯ ಮತ್ತು ಯುವ ಚಿತ್ರಕಲಾವಿದರ ಸಮಾಜಮುಖಿ ಚಿತ್ರಕಲೆಗಳು ಪ್ರೇಕ್ಷಕರ ಗಮನ ಸೆಳೆದವು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...