ಕಲಬುರಗಿ: ಬೀದರನಿಂದ ವಿಶೇಷ ರೈಲಿನ ಮೂಲಕ ಕಲಬುರಗಿ ರೈಲು ನಿಲ್ದಾಣಕ್ಕೆ ಆಗಮಿಸಿದ ಕೇಂದ್ರದ ರೈಲ್ವೆ ಮತ್ತು ಜಲ ಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರು ಕಲಬುರಗಿ ರೈಲ್ವೆ ನಿಲ್ದಾಣ ವೀಕ್ಷಣೆ ಮಾಡಿದರು.
ಅಮೃತ ಭಾರತ ಯೋಜನೆಯಡಿ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿಗಳ ಕುರಿತು ರೈಲ್ವೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಮುಖಂಡರು, ಪ್ರಯಾಣಿಕರು ಹಾಗೂ ಸಾರ್ವಜನಿಕರಿಂದ ಅಹವಾಲು ಆಲಿಸಿ ಮನವಿ ಪತ್ರ ಸ್ವೀಕರಿಸಿದರು. ಜಿಲ್ಲೆಗೆ ಆಗಮಿಸಿದ ಕೇಂದ್ರ ಸಚಿವರನ್ನು ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಅವರು ಹೂಗುಚ್ಛ ನೀಡಿ ಬರಮಾಡಿಕೊಂಡರು.
ವಿಧಾನ ಪರಿಷತ್ ಶಾಸಕರಾದ ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ, ಮಾಜಿ ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಅಮರನಾಥ ಪಾಟೀಲ, ಸೋಲಾಪೂರ ರೈಲ್ವೆ ವಿಭಾಗದ ಡಿ.ಆರ್.ಎಂ. ಡಾ. ಸುಜಿತ್ ಮಿಶ್ರಾ ಸೇರಿದಂತೆ ರೈಲ್ವೆ ಇಲಾಖೆಯ ಹಿರಿಯ ಅಧಿಕಾರಿಗಳು ಇದ್ದರು.