ಕಲಬುರಗಿ | ಕವಯತ್ರಿ, ಲೇಖಕಿ ಡಾ. ತಮಿಳು ಸೆಲ್ವಿಗೆ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿ

Date:

Share post:

ಕಲಬುರಗಿ: ಪ್ರೊ. ಮಲ್ಲೇಪುರಂ ಸಾಂಸ್ಕøತಿಕ ಪ್ರತಿಷ್ಠಾನ, ಚೆನ್ನೈನ ಮದ್ರಾಸ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಹಿರಿಯ ಪ್ರಾಧ್ಯಾಪಕಿ ಮತ್ತು ಮುಖ್ಯಸ್ಥರಾಗಿರುವ ಕವಿ, ಸಂಶೋಧಕರಿ ಡಾ. ತಮಿಳ ಸೆಲ್ವಿ ಅವರ ಸಾಹಿತ್ಯ ಸಾಧನೆಯನ್ನು ಪರಿಗಣಿಸಿ ಪ್ರೊ. ಎಚ್.ಟಿ. ಪೋತೆಯವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 2025ನೇ ಸಾಲಿನ ಮಲ್ಲೇಪುರಂ ಸಾಹಿತ್ಯ ಪ್ರಶಸ್ತಿಗೆ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.

 

ಚೈನ್ನೈಯಲ್ಲಿದ್ದುಕೊಂಡು ಕನ್ನಡ ಮತ್ತು ತಮಿಳು ಸಾಹಿತ್ಯ ಸಂಸ್ಕøತಿ ಬೆಳವಣಿಗೆಗೆ ಶ್ರಮಿಸುತ್ತಿದ್ದಾರೆ. ‘ಅವರ ನಾನು ಅವಳಲ್ಲ ಅವನು’ ಅನುವಾದಿತ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಶ್ರೇಷ್ಠ ಅನುವಾದಕಿ ಪ್ರಶಸ್ತಿ ಸೇರಿದಂತೆ. ಕರ್ನಾಟಕ ಸಾಹಿತ್ಯ ಅಕಾಡೆಮಿ ತಮಿಳು ನಾಡಿನ ಶ್ರೇಷ್ಠ ಲೇಖಕಿ ಪ್ರಶಸ್ತಿಯೂ ಸೇರಿದಂತೆ ಅವರ ಅನೇಕ ಕೃತಿಗಳಿಗೆ ಪ್ರಶಸ್ತಿ ಗೌರವಗಳು ಸಂದಿವೆ.

 

2025 ಜೂನ್ 05 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಪರಿಷನ್ಮಂದಿರದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ. ಪ್ರಶಸ್ತಿಯು 10,000 ರೂ. ನಗದು ಪ್ರಶಸ್ತಿ ಫಲಕ ಶಾಲು ಸನ್ಮಾನ ಹೊಂದಿರುತ್ತದೆ.

ಪ್ರತಿಷ್ಠಾನದ ಅಧ್ಯಕ್ಷ ಡಾ. ವಸಂತ ನಾಶಿ, ಡಾ. ಸಂತೋಷಕುಮಾರ ಕಂಬಾರ, ಡಾ. ಹಣಮಂತ ಮೇಲಕೇರಿ ಸಭೆಯಲ್ಲಿ ಹಾಜರಿದರು ಎಂದು ಪ್ರತಿಷ್ಠಾನದ ಅಧ್ಯಕ್ಷ ಡಾ. ಶ್ರೀಶೈಲ ನಾಗರಾಳ ಮತ್ತು ಕಾರ್ಯದರ್ಶಿ ಡಾ. ಎಂ.ಬಿ. ಕಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ಜಂಟಿಯಾಗಿ ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಜೇವರ್ಗಿ ಆಸ್ಪತ್ರೆಯ ಒಪಿಡಿ ಪುಸ್ತಕದಲ್ಲಿ ‘ಪೂಜಿಸಲೆಂದೇ ಹೂಗಳ ತಂದೆ’ ಗೀತೆ ಪ್ರತ್ಯಕ್ಷ

ಕಲಬುರಗಿ: ಆಸ್ಪತ್ರೆಯ ಹೊರ ರೋಗಿಗಳ (ಒಪಿಡಿ) ದಾಖಲಾತಿ ಪುಸ್ತಕದಲ್ಲಿ ಆಸ್ಪತ್ರೆಯ ಸಿಬ್ಬಂದಿ...

ಕಲಬುರಗಿ| ರಾಷ್ಟ್ರೀಯ ಲೋಕ್ ಅದಾಲತ್‍ದಲ್ಲಿ 1,76,324 ಪ್ರಕರಣಗಳು ಇತ್ಯರ್ಥ

ಕಲಬುರಗಿ: ಗೌರವಾನ್ವಿತ ಉಚ್ಛ ನ್ಯಾಯಾಲಯ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ...

ಕಲಬುರಗಿ| ಬಾಲಕನ ಪೋಷಕರ ಪತ್ತೆಗೆ ಮನವಿ

ಕಲಬುರಗಿ: ಕಲಬುರಗಿ ಚೈಲ್ಡ್‍ಲೈನ್ ಸಂಸ್ಥೆ ಮೂಲಕ 8 ವರ್ಷದ ವಿಷ್ಣು ನಾಯಕ...

ಕಲಬುರಗಿ: ಜುಲೈ 15ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...