ಕಲಬುರಗಿ: ಖಾಲಿಯಿರುವ ಗೃಹರಕ್ಷಕರ ಸ್ವಯಂ ಸೇವಕ ಸದಸ್ಯರ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರು ತಿಳಿಸಿದ್ದಾರೆ.
ಅಭ್ಯರ್ಥಿಗಳು ಅರ್ಜಿ ಪಡೆಯುವ ಸಂದರ್ಭದಲ್ಲಿ ಆಧಾರ ಕಾರ್ಡ್, ಜನ್ಮ ದಿನಾಂಕ ಕುರಿತು ಶಾಲೆಯ ಮೂಲ ದಾಖಲಾತಿ ಹಾಗೂ ಸರ್ಕಾರಿ ಆಸ್ಪತ್ರೆಯಿಂದ ದೈಹಿಕ ಪ್ರಮಾಣ (ಕಡ್ಡಾಯವಾಗಿ ಫಿಜಿಕಲ್ ಫಿಟ್ನೆಸ್ (Physical Fittness) ಪ್ರತಿ ತರಬೇಕು. ಕಲಬುರಗಿ ರಾಜಾಪೂರ ಕುಸನೂರ ರಸ್ತೆಯ ಸರ್ಕಾರಿ ಡಿಗ್ರಿ ಕಾಲೇಜು ಹಿಂದುಗಡೆಯಿರುವ ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟರವರ ಕಚೇರಿಯಲ್ಲಿ ಕಚೇರಿ ಸಮಯದಲ್ಲಿ 2025ರ ಜುಲೈ 2 ರಿಂದ 7 ರವರೆಗೆ ಉಚಿತವಾಗಿ ಅರ್ಜಿ ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲೆಗಳೊಂದಿಗೆ 2025ರ ಜುಲೈ 10 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ. ಉತ್ತೀರ್ಣವಾಗಿರಬೇಕು. ಪುರುಷರ ಎತ್ತರ 168 ಸೆಂ.ಮೀ. ಹಾಗೂ ಮಹಿಳೆಯರು 157 ಸೆಂ.ಮೀ. ಎತ್ತರ ಇರಬೇಕು. ಅಭ್ಯರ್ಥಿಗಳು ಯಾವುದೇ ಕ್ರಿಮಿನಲ್ ಹಿನ್ನೆಲೆ ಹೊಂದಿರಬಾರದು.
ಅರ್ಜಿ ಸಲ್ಲಿಸಿದ ಎಲ್ಲಾ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಜುಲೈ 13 ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ಅರ್ಜಿಯೊಂದಿಗೆ ಲಗತ್ತಿಸಿದ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ಕಲಬುರಗಿಯ ಡಿ.ಎ.ಆರ್. ಪೊಲೀಸ್ ಕವಾಯತು ಮೈದಾನಕ್ಕೆ ಹಾಜರಾಗಬೇಕು.
ಗೃಹರಕ್ಷಕ ದಳ ಸಂಸ್ಥೆಯು ಸ್ವಯಂ ಸೇವಕ ಸಂಸ್ಥೆಯಾಗಿದ್ದು, ಈ ಸಂಸ್ಥೆಯಲ್ಲಿ 3 ವರ್ಷದ ಅವಧಿಗೆ ಮಾತ್ರ ಸೇವೆ ಸಲ್ಲಿಸಬಹುದಾಗಿದೆ. ಇದು ಖಾಯಂ ನೌಕರಿ ಇರುವುದಿಲ್ಲ. ಯಾವುದೇ ಮಾಸಿಕ ಸಂಬಳ ಅಥವಾ ವಿಶೇಷ ಭತ್ಯೆಗಳನ್ನು ನೀಡಲಾಗುವುದಿಲ್ಲ. ಸರ್ಕಾರ ನಿಗದಿಪಡಿಸಿರುವ ಗೌರವ ಧನವನ್ನು ಕರ್ತವ್ಯ ನಿರ್ವಹಿಸುವ ಅವಧಿಗೆ ಮಾತ್ರ ಪಾವತಿಸಲಾಗುತ್ತದೆ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಗೃಹ ರಕ್ಷಕ ದಳದ ಜಿಲ್ಲಾ ಸಮಾದೇಷ್ಟರ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-245735ಗೆ ಸಂಪರ್ಕಿಸಲು ಕೋರಲಾಗಿದೆ.