ಕಲಬುರಗಿ: ಗೋದುತಾಯಿ ಪದವಿ ಮಹಾವಿದ್ಯಾಲಯದಲ್ಲಿ ಕಲಾವಾಣಿ ವಾರ್ಷಿಕೋತ್ಸವ

Date:

Share post:

ಕಲಬುರಗಿ : ವಿದ್ಯಾರ್ಥಿನಿಯರು ಉತ್ತಮ ಭವಿಷ್ಯ ನಿರ್ಮಿಸಿಕೊಳ್ಳುವ ಕನಸು ಕಾಣಬೇಕೆಂದು ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹೇಳಿದರು.

ನಗರದ ಗೋದುತಾಯಿ ದೊಡ್ಡಪ್ಪ ಅಪ್ಪ ಕಲಾ, ವಾಣಿಜ್ಯ ಮತ್ತು ವಿಜ್ಞಾನ ಪದವಿ ಮಹಿಳಾ ಮಹಾವಿದ್ಯಾಲಯದಲ್ಲಿ ಸೋಮವಾರ ವಾರ್ಷಿಕೋತ್ಸವ ಕಾರ್ಯಕ್ರಮ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪೂಜ್ಯ ಲಿಂ.ದೊಡ್ಡಪ್ಪ ಅಪ್ಪ ಅವರು ಮೊದಲಿಗೆ ಹೆಣ್ಣು ಮಕ್ಕಳಿಗಾಗಿ ಶಾಲೆ ಆರಂಭಿಸಿದರು. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂದು ಮನಗಂಡು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ಮುನ್ನಡಿ ಹಾಡಿದರು. ಮುಂದೆ ಡಾ. ಶರಣಬಸವಪ್ಪ ಅಪ್ಪಾ ಅವರು ಹೆಣ್ಣು ಮಕ್ಕಳಿಗೆ ಅನೇಕ ಶಾಲಾ-ಕಾಲೇಜುಗಳು ತೆರೆದು ಅವರ ಭವಿಷ್ಯ ರೂಪಿಸಿಕೊಳ್ಳಲು ದಾರಿ ಮಾಡಿಕೊಟ್ಟರು. ಈ ಸಂಸ್ಥೆಯಲ್ಲಿ ಕಲಿತ ಸಾವಿರಾರು ಮಹಿಳೆಯರು ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಸಮಯ ವ್ಯರ್ಥ ಮಾಡದೆ ಓದಿನ ಕಡೆಗೆ ಹೆಚ್ಚು ಹೆಚ್ಚು ಸಮಯ ಕಳೆಯಬೇಕು. ಪಠ್ಯದ ಜೊತೆಗೆ ಪಠ್ಯೇತರ ವಿಷಯಗಳನ್ನು ಓದಿ ತಿಳಿದುಕೊಳ್ಳಬೇಕು. ಯಾವ ವಿಷಯದಲ್ಲಿ ಹೆಚ್ಚು ಪರಿಣತಿ ಇರುವುದನ್ನು ನೋಡಿಕೊಂಡು ಆ ವಿಷಯದಲ್ಲಿ ಭವಿಷ್ಯ ರೂಪಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ರೇಷ್ಮಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಭಾರತಿ ಎನ್.ರೇಷ್ಮಿ ಮಾತನಾಡಿ, ವಿದ್ಯಾರ್ಥಿಗಳು ಜ್ಞಾನ, ಕೌಶಲ್ಯ ಮತ್ತು ಆತ್ಮವಿಶ್ವಾಸ ಬೆಳೆಸಿಕೊಳ್ಳಬೇಕು. ಶರಣಬಸವೇಶ್ವರ ಸಂಸ್ಥಾನ ಮೌಲ್ಯಯುತ, ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತಾ ಈ ಭಾಗವು ಶೈಕ್ಷಣಿವಾಗಿ ಬೆಳೆಯಲು ಕಾರವಾಗಿದೆ. ಅದರಲ್ಲೂ ಹೆಣ್ಣು ಮಕ್ಕಳಿಗೆ ಶಿಕ್ಷಣಕ್ಕೆ ಈ ಸಂಸ್ಥೆ ಭದ್ರಬುನಾದಿ ಹಾಕಿದೆ. ಶರಣಬಸವೇಶ್ವರ ಸಂಸ್ಥಾನದಲ್ಲಿ ಸಾಮಾನ್ಯರಿಗೂ ಓದುವ ಅವಕಾಶವನ್ನು ಪೂಜ್ಯ ಡಾ.ಅಪ್ಪಾಜಿ ಮತ್ತು ಡಾ.ಅವ್ವಾಜಿಯವರು ಕಲ್ಪಿಸಿಕೊಡುತ್ತಾರೆ. ವಿದ್ಯಾರ್ಥಿಗಳು ಗುರುಗಳ ಮಾರ್ಗದರ್ಶನದಿಂದ ಭವಿಷ್ಯ ಉಜ್ವಲಗೊಳಿಸಿಕೊಳ್ಳುವುದಕ್ಕೆ ಸತತ ಪ್ರಯತ್ನ ಮಾಡಬೇಕು. ಎಂಥ ಕಷ್ಟಗಳು ಬಂದರೂ ಧೈರ್ಯದಿಂದ ಎದುರಿಸಿ ಸವಾಲಾಗಿ ಸ್ವೀಕರಿಸಿ ಬೆಳೆಯಬೇಕು, ಒಳ್ಳೆಯ ಅವಕಾಶಗಳನ್ನು ನಾವೇ ಸೃಷ್ಠಿಸಿಕೊಳ್ಳಬೇಕು. ಸಾಧನೆ ಸಾಧಿಸಿ ನಿರಂತರ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು.

ಶರಣಬಸವೇಶ್ವರ ದೇವಸ್ಥಾನ ಆವರಣದ ನಿರ್ದೇಶಕರಾದ ಡಾ.ನೀಲಾಂಬಿಕಾ ಶೇರಿಕಾರ, ಮಾತನಾಡಿ, ಪ್ರತಿಯೊಬ್ಬರಲ್ಲೂ ಎಲ್ಲವನ್ನು ಸಾಧಿಸುವ ಗುಣ ಇರುತ್ತದೆ ಅದನ್ನು ಹೊರ ತರುವ ಪ್ರಯತ್ನ ಮಾಡಬೇಕು. ಕಷ್ಟದ ಫಲವಾಗಿಯೇ ದೊಡ್ಡ ದೊಡ್ಡ ವ್ಯಕ್ತಿಗಳಾಗಿ ಬೆಳೆಯಲು ಸಾಧ್ಯವಿದೆ. ವಿದ್ಯಾರ್ಥಿಗಳು ಉತ್ತಮವಾಗಿ ಓದಿ ಕೀರ್ತಿ ತರುವ ಕೆಲಸ ಮಾಡಬೇಕು. ಈ ಭಾಗದಲ್ಲಿ ಹೆಣ್ಣು ಮಕ್ಕಳು ಶೈಕ್ಷಣಿಕವಾಗಿ ಬೆಳೆಯಲು ಶರಣಬಸವೇಶ್ವರ ಸಂಸ್ಥೆಯೇ ಕಾರಣ ಎಂದು ಹೇಳಿದರು.

 

 

ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ ಸ್ವಾಗತ ಮತ್ತು ಪ್ರಾಸ್ತಾವಿಕ ಮಾತನಾಡಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ಡಾ.ಸೀಮಾ ಪಾಟೀಲ ವಾರ್ಷಿಕ ವರದಿ ವಾಚನ ಮಾಡಿದರು. ಮುಕ್ತಾಂಬಿಕಾ ಪದವಿಪೂರ್ವ ವಿಜ್ಞಾನ ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ.ಎಂ.ಆರ್.ಹುಗ್ಗಿ, ವಿದ್ಯಾರ್ಥಿನಿಯರು ಇದ್ದರು.

ಕೃಪಾಸಾಗರ ಗೊಬ್ಬುರ್, ಡಾ.ಶಾಂತಲಿoಗ ಘಂಟೆ ಮತ್ತು ಪ್ರೀತಿ ಬಿರಾದಾರ ಅತಿಥಿ ಪರಿಚಯ ಮಾಡಿದರು, ಕಲಾವಾಣಿ ವಿದ್ಯಾರ್ಥಿ ಸಂಘದ ಸಲಹೆಗಾರಾದ ಡಾ.ಕಾಮೇಶ ದಾಮಾ ವಂದಿಸಿದರು. ಕು.ಅಂಬಿಕಾ ಮೈನಾಳ, ಕು.ಜವೇರಿಯ ಅಂಜುಮ್ ನಿರೂಪಿಸಿದರು. ಸಂಗೀತ ವಿಭಾಗದ ಪ್ರಾಧ್ಯಾಪರು ಮತು ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಮಹಾವಿದ್ಯಾಲಯದ ಶಿಕ್ಷಕ ಮತ್ತು ಶಿಕ್ಷಕೇತರರು ಮತ್ತು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

 

 

 

 

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯಕ್ಕೆ ಈ ಸಾಲಿನಲ್ಲಿ ನಡೆಸಿದ ಅಂತಿಮ ವರ್ಷದ ಪದವಿ ಕಲಾ ವಿಭಾಗದಲ್ಲಿ 2ನೇ ರ‍್ಯಾಂಕ ಪಡೆದ ಮಹಾವಿದ್ಯಾಲಯ ವಿದ್ಯಾರ್ಥಿನಿ ಕು.ವಿದ್ಯಾಶ್ರೀ, ಈ ವರ್ಷ ವಿವಿಧ ಕ್ಷೇತ್ರಗಳಲ್ಲಿ ಪ್ರಶಸ್ತಿ ಪಡೆದ ಪ್ರಾಚಾರ್ಯೆ ಡಾ.ಪುಟ್ಟಮಣಿ ದೇವಿದಾಸ , ಪ್ರಾಧ್ಯಾಪಕರಾದ ಡಾ.ಸಿದ್ಧಲಿಂಗರೆಡ್ಡಿ ಮತ್ತು ಡಾ.ಶಾಂತಲಿoಗ ಘಂಟೆ, ಅವರನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರನ್ನು ಸನ್ಮಾನಿಸಲಾಯಿತು.

Share post:

spot_imgspot_img

Popular

More like this
Related

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...