ಕಲಬುರಗಿ: 79 ನೆಯ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕಲಬುರಗಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಲಾಯಿತು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹಾಗೂ ಎಂ ಎಲ್ ಸಿ ಆಗಿರುವ ಜಗದೇವ ಗುತ್ತೇದಾರ ಅವರು ಧ್ವಜಾರೋಹಣ ನೆರವೇರಿಸಿದರು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ, ಕೆಕೆಆರ್ಡಿಬಿ ಅಧ್ಯಕ್ಷ, ಜೇವರ್ಗಿ ಶಾಸಕ ಡಾ.ಅಜಯ್ ಸಿಂಗ್, ಶಾಸಕಿ ಖನೀಜ್ ಫಾತೀಮಾ, ಅಲ್ಲಮ ಪ್ರಭು ಪಾಟೀಲ್, ಎಂಎಲ್ಸಿ ತಿಪ್ಪಣ್ಣಪ್ಪ ಕಮಕನೂರ್, ಕುಡಾ ಅಧ್ಯಕ್ಷ ಮಝಹರ್ ಖಾನ್ ಆಲಂ, ನೀಲಕಂಠರಾವ್ ಮೂಲಗೆ, ಕಿರಣ್ ದೇಶಮುಖ್, ಲಿಂಗರಾಜ ತಾರಫೈಲ್, ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮುಖಂಡರು, ಕಾರ್ಯಕರ್ತರು ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.
ಇದೇ ಸಂದರ್ಭದಲ್ಲಿ, ನಿನ್ನೆ ಲಿಂಗೈಕ್ಯರಾದ ಪೂಜ್ಯ ಡಾ ಶರಣಬಸವಪ್ಪ ಅಪ್ಪಾಜೀ ಅವರಿಗೆ ಗೌರವ ಸೂಚಿಸುವ ಸಲುವಾಗಿ ಎರಡು ನಿಮಿಷದ ಮೌನಾಚರಣೆ ಮಾಡಲಾಯಿತು.