ಕಲಬುರಗಿ| ಜೀವಣಗಿ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ ಭೇಟಿ

Date:

Share post:

ಕಲಬುರಗಿ: ಕೆ.ಪಿ.ಟಿ.ಸಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಪಂಕಜ್ ಕುಮಾರ ಪಾಂಡೆ ಅವರು ಸೋಮವಾರ ಕಮಲಾಪೂರ ತಾಲೂಕಿನ ಜೀವಣಗಿ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮದಲ್ಲಿ ಅಂತರ್ಜಲ ಹೆಚ್ಚಳಕ್ಕೆ ಉನ್ನತಿಕರಿಸಲಾಗುತ್ತಿರುವ ಕಲ್ಯಾಣಿ ಕೆಲಸ ವೀಕ್ಷಿಸಿದರು.

ಗ್ರಾಮಸ್ಥರ ಜೊತೆ ಚರ್ಚಿಸಿ ಕಲ್ಯಾಣಿ ಸಮರ್ಪಕವಾಗಿ ಬಳಕೆ ಮಾಡಬೇಕು. ಸ್ವಚ್ಛತೆ ಕಾಪಾಡಬೇಕೆಂದರು. ಗ್ರಾಮಸ್ಥರಿಗೆ ನೀರಿನ ಗುಣಮಟ್ಟ ಪರೀಕ್ಷಿಸಿ ಶದ್ಧ ಕುಡಿಯುವ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು. ಗ್ರಾಮದಲ್ಲಿರುವ ಆರಿವು ಕೇಂದ್ರಕ್ಕೆ ಭೇಟಿ ನೀಡಿದ ಪಂಕಜ್ ಕುಮಾರ ಪಾಂಡೆ ಅವರು, ಕೇಂದ್ರದಲ್ಲಿನ ಸ್ಫರ್ಧಾತ್ಮಕ ಪುಸ್ತಕದ ಬಗ್ಗೆ ಮಾಹಿತಿ ಪಡೆದರು.

ಇದಕ್ಕೂ ಮುನ್ನ ತಾಲೂಕಿನ ಕಿಣ್ಣಿಸಡಕ್ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಮನೆಗಲಿಗೆ ನಲ್ಲಿ ಸಂಪರ್ಕ ಕಲ್ಪಿಸುವ ಕಾರ್ಯದ ಕಾಮಗಾರಿಯನ್ನು ಪರಿಶೀಲಿಸಿದರು. ಇದೇ ಸಂದರ್ಭದಲ್ಲಿ ಗ್ರಾಮದ ಮಹಿಳೆಯೊಂದಿಗೆ “ಗೃಹ ಜ್ಯೋತಿ” ಯೋಜನೆಯ ಲಾಭದ ಕುರಿತು ಮಹಿಳೆಯರೊಂದಿಗೆ ಚರ್ಚಿಸಿದರು. ಯೋಜನೆ ಜಾರಿಯಿಂದ ಶೂನ್ಯ ವಿದ್ಯುತ್ ಬಿಲ್ಲು ಬರುತ್ತಿದ್ದು, ಬಿಲ್ಲಿನ ಹಣ ಕುಟುಂಬ ನಿರ್ವಹಣೆಗೆ ಬಳಕೆಯಾಗುತ್ತಿದೆ ಎಂದು ತಿಳಿಸಿದರು.

ಕಲಬುರಗಿ ಜಿಲ್ಲಾ ಪಂಚಾಯತಿಯ ಆಡಳಿತಾಧಿಕಾರಿಯೂ ಆಗಿರುವ ಪಂಕಜ್ ಕುಮಾರ ಪಾಂಡೆ ಅವರು ನಂತರ ಮಹಾಗಾಂವ ಗ್ರಾಮದ ಸರಕಾರಿ ಪ್ರೌಢ ಶಾಲೆಗೆ ಭೇಟಿ ನೀಡಿ ನರೇಗಾ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಿರುವ ಆಟದ ಮೈದಾನವನ್ನು ವೀಕ್ಷಿಸಿದರು. ಶಾಲೆಯ ಅಡುಗೆ ಕೋಣೆಗೆ ಭೇಟಿ ನೀಡಿ ಆಹಾರ ತಯಾರಿಕೆ ಕುರಿತು ಪರಿಶೀಲನೆ ಮಾಡಿದರು. ಮಧ್ಯಾಹ್ನದ ಬಿಸಿಯೂಟದ ಜೊತೆಗೆ ಮಕ್ಕಳಿಗೆ ವಿತರಣೆ ಮಾಡುತ್ತಿದ್ದ ಮೊಟ್ಟೆ, ಬಾಳೆ ಹಣ್ಣಿನ ಗುಣಮಟ್ಟ ಪರಿಶೀಲಿಸಿದ ಅವರು, ಮಕ್ಕಳಿಗೆ ಸ್ವತ: ಗಣಿತ ವಿಷಯದ ಕುರಿತು ಬೋಧನೆ ಮಾಡಿದಲ್ಲದೆ ಗುಣಮಟ್ಟದ ಶಿಕ್ಷಣ ಒದಗಿಸುವಂತೆ ಶಿಕ್ಷಕರಿಗೆ ಸೂಚಿಸಿದರು.

 

ಮಹಾಗಾಂವ ಗ್ರಾಮದ ಹೊರವಲಯದಲ್ಲಿ ನಿರ್ಮಾಣಗೊಂಡಿರುವ ಸಮಾಜ ಕಲ್ಯಾಣ ಇಲಾಖೆಯ ನೂತನ ವಸತಿ ನಿಲಯವನ್ನು ವೀಕ್ಷಣೆ ಮಾಡಿದ ಅವರು, ವಸತಿ ನಿಲಯಕ್ಕೆ ಸರಬರಾಜಾಗಿರುವ ಕಾಟ್, ಬೆಡ್, ಅಡುಗೆ ತಯಾರಿಕೆ ಸಾಮಾಗ್ರಿಗಳ ಗುಣಮಟ್ಟ ಪರಿಶೀಲಿಸಿ, ವಸತಿ ನಿಲಯದಲ್ಲಿ ನೈರ್ಮಲ್ಯ ಕಾಪಾಡುವುದರ ಜೊತೆಗೆ ಮಕ್ಕಳಿಗೆ ಗುಣಮಟ್ಟದ ಉಪಹಾರ, ಊಟ ಪೂರೈಸಬೇಕೆಂದು ನಿಲಯದ ಮೇಲ್ವಿಚಾರಕಿಗೆ ನಿರ್ದೇಶನ ನೀಡಿದರು. ಕುರಿಕೋಟಾ ಅಂಗನವಾಡಿ ಕೇಂದ್ರಕ್ಕು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಭೇಟಿ ನೀಡಿದರು.

ಮಕ್ಕಳೊಂದಿಗೆ ಊಟ ಸವಿದ ಕಾರ್ಯದರ್ಶಿಗಳು:

ಅವರಾದ (ಬಿ) ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ ಅವರು, ಮಕ್ಕಳೊಂದಿಗೆ ಮಧ್ಯಾಹ್ನದ ಊಟ ಸೇವನೆ ಮಾಡಿ ಅದರ ಗುಣಮಟ್ಟ ಪರಿಶೀಲಿಸಿದರು. ನಂತರ ಮಕ್ಕಳೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆ ಆಲಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರವೀಂದ್ರ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ, ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ, ತಾಲೂಕ ಪಂಚಾಯತ್ ಇ.ಓ ನೀಲಗಂಗಾ ಬಬಲಾದ, ತಹಶೀಲ್ದಾರ ಕೆ.ಆನಂದಶೀಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಗಿರೀಶ ರಂಜೋಳಕರ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....