ಕಲಬುರಗಿ| ಜುಲೈ 12 ರಂದು “ರಾಷ್ಟ್ರೀಯ ಲೋಕ ಅದಾಲತ್”: ಶ್ರೀನಿವಾಸ ನವಲೆ

Date:

Share post:

ಕಲಬುರಗಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಜಿಲ್ಲೆಯಲ್ಲಿ 2025ರ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್’ನ್ನು ಹಮ್ಮಿಕೊಳ್ಳಲಾಗಿದ್ದು, ಕಕ್ಷಿದಾರರು ಮತ್ತು ಸಾರ್ವಜನಿಕರು ಈ ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡೆಯಬೇಕೆಂದು ಕಲಬುರಗಿ ಹಿರಿಯ ಸಿವಿಲ್ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಶ್ರೀನಿವಾಸ ನವಲೆ ಅವರು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಆದೇಶದ ಮೇರೆಗೆ ಕಲಬುರಗಿ ಮತ್ತು ಕಲಬುರಗಿ ಜಿಲ್ಲೆಗೆ ಒಳಪಟ್ಟ ಎಲ್ಲಾ ತಾಲ್ಲೂಕು ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥವಾಗುವಂತಹ ಪ್ರಕರಣಗಳನ್ನು ಪ್ರತಿದಿನ ನಡೆಸುತ್ತಿರುವ ಲೋಕ ಅದಾಲತ್/ಖಾಯಂ ಜನತಾ ನ್ಯಾಯಾಲಯಗಳಲ್ಲಿ ರಾಜೀ ಸಂಧಾನದ ಮೂಲಕ ಎಲ್ಲಾ ಕಕ್ಷಿದಾರರು, ಸಾರ್ವಜನಿಕರು ಹಾಗೂ ಸಂಬಂಧಪಟ್ಟವರು ಭಾಗವಹಿಸಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಇದಲ್ಲದೇ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಸಹ ಲೋಕ ಅದಾಲತ್‍ನಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕೆಂದು ಅವರು ತಿಳಿಸಿದ್ದಾರೆ.

ಕಳೆದ ಬಾರಿ ಮಾರ್ಚ್‍ನಲ್ಲಿ ಜರುಗಿದ ಲೋಕ ಅದಾಲತ್‍ನಲ್ಲಿ ಸಾಕಷ್ಟು ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿತ್ತು. ಸಾರ್ವಜನಿಕರು ಮತ್ತು ಕಕ್ಷಿದಾರರು ಸಮಯ ಮತ್ತು ಹಣ ಉಳಿತಾಯ ಮಾಡುವ ರಾಜಿ ಸಂಧಾನದ ಮೂಲಕ ಲೋಕ ಅದಾಲತ್‍ನಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಇದರ ಲಾಭ ಪಡೆಯಬೇಕು. ಲೋಕ ಅದಾಲತ್‍ನಲ್ಲಿ ಸಿವ್ಹಿಲ್ ವ್ಯಾಜ್ಯಗಳು, ರಾಜೀಯಾಗಬಹುದಾದ ಕ್ರಿಮಿನಲ್ ಪ್ರಕರಣಗಳನ್ನು, ಚೆಕ್ ಅಮಾನ್ಯ ಪ್ರಕರಣಗಳನ್ನು, ಬ್ಯಾಂಕ್ ವಸೂಲಿ ಪ್ರಕರಣ, ಮೋಟಾರು ವಾಹನ ಅಪಘಾತ ಪರಿಹಾರ ಕೇಳಿದ ಪ್ರಕರಣ, ಕಾರ್ಮಿಕ ವ್ಯಾಜ್ಯಗಳನ್ನು, ಕೌಟುಂಬಿಕ ನ್ಯಾಯಾಲಯದಲ್ಲಿನ ಕೆಲವು ಪ್ರಕರಣಗಳನ್ನು ಮತ್ತು ಅಮಲ್‍ಜಾರಿ ಪ್ರಕರಣಗಳನ್ನು ಲೋಕ ಅದಾಲತ್‍ನಲ್ಲಿ ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ. ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವ ಉಭಯ ಪಕ್ಷಗಾರರಿಗೆ ಕೆಳಕಂಡ ಲಾಭಗಳು ದೊರೆಯಲಿದೆ.

ಜನತಾ ನ್ಯಾಯಾಲಯಗಳಲ್ಲಿ ಉಭಯ ಪಕ್ಷಗಾರರು ರಾಜೀ ಮಾಡಿಕೊಳ್ಳಲು ಮಾರ್ಗದರ್ಶನ ನೀಡಲಾಗುತ್ತದೆ. ಜನತಾ ನ್ಯಾಯಾಲಯದಲ್ಲಿ ಕೊಡುವ ತೀರ್ಪು ನ್ಯಾಯಾಲಯದಲ್ಲಿ ಕೊಡುವ ತೀರ್ಪಿನಷ್ಟು ಪರಿಣಾಮಕಾರಿಯಾಗಿರುತ್ತದೆ. ಯಾವುದೇ ಮೇಲ್ಮನವಿ ಅಥವಾ ಖರ್ಚು ವೆಚ್ಚ ಇರುವುದಿಲ್ಲ. ತಮ್ಮ ವ್ಯಾಜ್ಯವನ್ನು ಜನತಾ ನ್ಯಾಯಾಲಯದ ಮೂಲಕ ಕಡಿಮೆ ಖರ್ಚಿನಲ್ಲಿ ಮತ್ತು ಶೀಘ್ರವಾಗಿ ಇತ್ಯರ್ಥಗೊಳಿಸಿಕೊಳ್ಳಬಹುದು. ಜನತಾ ನ್ಯಾಯಾಲಯದಲ್ಲಿ ತಾವು ವಕೀಲರ ಮುಖಾಂತರ ಅಥವಾ ತಾವೇ ನೇರವಾಗಿ ಭಾಗವಹಿಸಬಹುದು. ಸೌಹಾರ್ದಯುತವಾಗಿ ಪ್ರಕರಣಗಳನ್ನು ಇತ್ಯರ್ಥಗೊಳ್ಳುವುದರಿಂದ ಉತ್ತಮ ಬಾಂಧವ್ಯ ಉಳಿಯುವುದರ ಜೊತೆಗೆ ನೆಮ್ಮದಿಯು ಸಹ ಉಳಿಯಲಿದೆ. ಜನತಾ ನ್ಯಾಯಾಲಯದಲ್ಲಿ ಎಲ್ಲಾ ರೀತಿಯ ವ್ಯಾಜ್ಯಪೂರ್ವ ಪ್ರಕರಣಗಳನ್ನು ಪ್ರತಿನಿತ್ಯ ನಡೆಯುತ್ತಿರುವ ಜನತಾ ನ್ಯಾಯಾಲಯದಲ್ಲಿ ಸಂಧಾನದ ಮುಖೇನ ಇತ್ಯರ್ಥಪಡಿಸಿಕೊಳ್ಳಲು ಅತ್ಯುತ್ತಮ ಅವಕಾಶವಿದೆ. ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಪೂರ್ಣವಾಗಿ ಹಿಂದಿರುಗಿಸಲಾಗುವುದು. ರಾಜಿ ಸಂಧಾನದ ಮೂಲಕ ಇತ್ಯರ್ಥಗೊಂಡ ಪ್ರಕರಣಗಳಿಗೆ ಮೇಲ್ಮನವಿಯ ಅವಕಾಶವಿರುವುದಿಲ್ಲ.

ಸಾರ್ವಜನಿಕರು ಮತ್ತು ಕಕ್ಷಿದಾರರು ಮೇಲ್ಕಂಡ ದಿನದಂದು ನಡೆಯುವ ಲೋಕ್ ಅದಾಲತ್‍ನಲ್ಲಿ ಭಾಗವಹಿಸಿ ತಮ್ಮ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಜಿಲ್ಲೆಯಲ್ಲಿರುವ ಯಾವುದೇ ತಾಲ್ಲೂಕು ಕಾನೂನು ಸೇವಾ ಸಮಿತಿಯನ್ನು ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...