ಕಲಬುರಗಿ| ಜುಲೈ 8 ರಂದು ಮಿನಿ ಉದ್ಯೋಗ ಮೇಳ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ 8 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಉದ್ಯೋಗ ಮೇಳದಲ್ಲ್ಲಿ ಭಾಗವಹಿಸಲಿರುವ ಕಂಪನಿಗಳ ವಿವರ ಇಂತಿದೆ: ಮೆಡ್‍ಪ್ಲಸ್ ಫಾರ್ಮಸಿಯಲ್ಲಿ ಫಾರ್ಮಸಿಸ್ಟ್ ಹುದ್ದೆಗೆ ಡಿ-ಫಾರ್ಮಸಿ (ಕೆಎಸ್‍ಪಿಸಿ ಪ್ರಮಾಣೀಕೃತ) ವಿದ್ಯಾರ್ಹತೆ ಹೊಂದಿರಬೇಕು. ಫಾರ್ಮಸಿ ಎಐಡಿಇ ಮತ್ತು ಸಿಎಸ್‍ಎ ಹುದ್ದೆಗೆ ಪಿಯುಸಿ/ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 21 ರಿಂದ 40 ವರ್ಷದೊಳಗಿರಬೇಕು. ಕಲಬುರಗಿ ಕಿಡ್ಜಿ ಪ್ರಿ ಸ್ಕೂಲ್‍ದಲ್ಲಿ ಪ್ರಾಥಮಿಕ ಶಿಕ್ಷಕರ ಹುದ್ದೆಗೆ ಎನ್‍ಟಿಟಿಸಿ ಬಿ.ಎಡ್./ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 25 ರಿಂದ 40 ವರ್ಷದೊಳಗಿರಬೇಕು.

ರಿಲಾಯನ್ಸ್ ಟ್ರೆಂಡ್ಸ್‍ದಲ್ಲಿ ಬ್ರಾಂಡ್ ಪ್ರಮೋಟರ್ ಹುದ್ದೆಗೆ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 24 ವರ್ಷದೊಳಗಿರಬೇಕು. ಮುತ್ತೂಟ್ ಮನಿದಲ್ಲಿ ಪ್ರೋಬೇಷನರಿ ಆಫೀಸರ್ ಹುದ್ದೆಗೆ ಎಮ್‍ಬಿಎ (ಹೆಚ್‍ಆರ್/ಮಾರ್ಕೇಟಿಂಗ್ ಎನ್‍ಜಿ/ಪೈನಾನ್ಸ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 29 ವರ್ಷದೊಳಗಿರಬೇಕು. ಟ್ಯಾಲಿ ಸಲ್ಯೂಶನ್‍ದಲ್ಲಿ ವ್ಯಾಪಾರ ಅಭಿವೃದ್ಧಿ ಕಾರ್ಯನಿರ್ವಾಹಕ ಹುದ್ದೆ ಹಾಗೂ ಟೆಲಿಕಾಲರ್ ಹುದ್ದೆಗೆ ಪಿಯುಸಿ / ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 35 ವರ್ಷದೊಳಗಿರಬೇಕು.

ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ನಡೆಯುವ ಮಿನಿ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು.

ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ...

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ...

ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...

ಕಲಬುರಗಿ| ವನಮಹೋತ್ಸವಕ್ಕೆ ಚಾಲನೆ; ಹಸಿರಿದ್ದರೆ ಉಸಿರು, ಗಿಡ ನೆಟ್ಟು ಪರಿಸರ ಕಾಪಾಡಿ: ಡಾ.ಮಲ್ಲಿಕಾರ್ಜುನ ಖರ್ಗೆ

ಕಲಬುರಗಿ: ಭೂಮಿ ಮೇಲೆ ಜೀವನ ನಡೆಸಲು ನಿಸರ್ಗವೇ ಜೀವನಕ್ಕೆ ಆಧಾರವಾಗಿದೆ. ಹಸಿರಿದ್ದರೆ...