ಕಲಬುರಗಿ| ಜೂ.21 ಕ್ಕೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆಗೆ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಸೂಚನೆ

Date:

Share post:

ಕಲಬುರಗಿ: ಜೂನ್ 21 ರಂದು 11 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಇದಕ್ಕಾಗಿ ಜಿಲ್ಲಾಮಟ್ಟದ ಅಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬುಧುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಆಯುಷ್ ಇಲಾಖೆ, ಮಹಾವಿದ್ಯಾಲಯಗಳ ಪ್ರಾಂಶುಪಾಲರು ಮತ್ತು ವಿವಿಧ ಯೋಗ ಸಂಘಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳುವುದರ ಬಗ್ಗೆ ನಿರ್ಧಾರ ಕೈಗೊಂಡ ಬಳಿಕ ಅವರು ಮಾತನಾಡಿದರು.

ಈ ವರ್ಷ ‘ಒಂದು ಭೂಮಿ ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಯೋಗ ದಿನಾಚರಣೆ ಆಚರಿಸಲಾಗುತ್ತಿದೆ. ಈ ಯೋಗ ದಿನಾಚರಣೆಯ ಯಶಸ್ವಿಗೆ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ವಸತಿನಿಲಯದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ನೋಡಿಕೊಳ್ಳಬೇಕು ಎಂದರು.

ಮಕ್ಕಳಿಗೆ ಕ್ರೀಡಾಂಗಣಕ್ಕೆ ಕರೆ ತರಲು ವಾಹನದ ವ್ಯವಸ್ಥೆ ಮಾಡಲು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೂರ್ಯಕಾಂತ ಮದಾನೆ ಹಾಗೂ ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಅಕ್ಕಣ್ಣ ಅವರಿಗೆ ಸೂಚನೆ ನೀಡಿದರು.

ಯೋಗ ಮಾಡುವುದರಿಂದ ವ್ಯಕ್ತಿಯು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢನಾಗುತ್ತಾನೆ. ಅಲ್ಲದೆ, ವ್ಯಕ್ತಿಯು ಏಕಾಗ್ರತೆಯಿಂದ ಜೀವನದಲ್ಲಿ ಏನಾದರು ಸಾಧನೆಯನ್ನು ಮಾಡಲು ಸಾಧ್ಯವಿದೆ ಎಂದು ಹೇಳಿದರು.

ಅಂದು ನಡೆಯುವ ಕಾರ್ಯಕ್ರಮಕ್ಕೆ ಅಧಿಕಾರಿಗಳು ಅಚ್ಚುಕಟ್ಟಾಗಿ ಕೆಲಸವನ್ನು ನಿರ್ವಹಿಸಬೇಕೆಂದರು. ಕಲಬುರಗಿ ಅಧೀನದಲ್ಲಿ ಬರುವ 8 ಮತ್ತು 9 ನೇ ಹಾಗೂ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಎಲ್ಲಾ ಶಾಲಾ ಕಾಲೇಜುಗಳಿಂದ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಅವರಿಗೆ ಕರೆ ತರುವ ಜವಾಬ್ದಾರಿ ತಮ್ಮದಾಗಿರುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಅಮೃತ್ ಅಷ್ಟಗಿ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಮಾತನಾಡಿದರು.

ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತ ಅವಿನಾಶ ಶಿಂಧೆ, ಡಿಯುಡಿಸಿ ಯೋಜನಾ ನಿರ್ದೇಶಕ ಮುನ್ನವರ್ ದೌಲಾ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ. ಶರಣಪ್ಪ ಕ್ಯಾತನಾಳ, ಅಲ್ಪ ಸಂಖ್ಯಾತರ ಕಲ್ಯಾಣಾಧಿಕಾರಿ ಜಾವೀದ ಕರಂಗಿ, ಜಿಲ್ಲಾ ಆಯುಷ್ ಇಲಾಖೆ ಪ್ರಭಾರಿ ಅಧಿಕಾರಿ ಡಾ.ಕೆ.ಬಿ. ಬಬಲಾದಿ, ಆರ್ಯವೇಧಿಕ ಯೂನಾನಿ ಹೋಮಿಯೋಪಥಿ ಪ್ರಾಚಾರ್ಯರು, ಯೋಗ ಸಂಘ ಸಂಸ್ಥೆಗಳು ಸೇರಿದಂತೆ ವಿವಿಧ ಶಾಲಾ ಕಾಲೇಜಿನ ಪ್ರಾಂಶುಪಾಲಕರು ವಿವಿಧ ಸಂಘ ಸಂಸ್ಥೆಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ನಾಲ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧನ; 8.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

ಕಲಬುರಗಿ: ಕಳೆದ ಜೂನ್ 22 ರಂದು ಶಹಾಬಾದ ನಗರದ ಮನೆಯೊಂದರಲ್ಲಿ ನಡೆದ...

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....