ಕಲಬುರಗಿ| ಜೂ.21 ರಂದು 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಇವುಗಳ ಸಂಯುಕ್ತಾಶ್ರಯದಲ್ಲಿ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಶನಿವಾರ ಬೆಳಿಗ್ಗೆ 7 ಗಂಟೆಗೆ ಕಲಬುರಗಿ ನಗರದ ಡಾ. ಚಂದ್ರಶೇಖರ ಪಾಟೀಲ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಘನ ಉಪಸ್ಥಿತಿ ವಹಿಸುವರು. ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.

ರಾಜ್ಯದ ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಖಾತೆ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್, ಜೇವರ್ಗಿ ಶಾಸಕ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಾ. ಅಜಯಸಿಂಗ್, ಅಫಜಲಪುರ ಶಾಸಕ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷರಾದ ಎಂ.ವೈ. ಪಾಟೀಲ, ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಆಳಂದ ಶಾಸಕ ಹಾಗೂ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರಾದ ಬಿ.ಆರ್. ಪಾಟೀಲ ಹಾಗೂ ಕರ್ನಾಟಕ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಅವರು ಗೌರವ ಉಪಸ್ಥಿತಿವಹಿಸುವರು. ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು.

 

ಕಲಬುರಗಿ ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ, ಬೀದರ ಲೋಕಸಭಾ ಸದಸ್ಯ ಸಾಗರ ಖಂಡ್ರೆ, ಶಾಸಕರುಗಳಾದ ಬಸವರಾಜ ಮತ್ತಿಮಡು, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ ಜಿ. ನಮೋಶಿ, ಡಾ. ಬಿ.ಜಿ.ಪಾಟೀಲ, ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ತಿಮ್ಮಣ್ಣಪ್ಪ ಕಮಕನೂರ, ಸುನೀಲ್ ವಲ್ಲ್ಯಾಪುರೆ, ಡಾ. ತಳವಾರ ಸಾಬಣ್ಣಾ, ಜಗದೇವ ಗುತ್ತೇದಾರ್, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಅಧ್ಯಕ್ಷ ದೇವಿಂದ್ರಪ್ಪ ಮರತೂರ, ಕರ್ನಾಟಕ ವಕ್ಫ್ ಮಂಡಳಿಯ ಅಧ್ಯಕ್ಷ ಸೈಯದ್ ಮಹಮ್ಮದ್ ಅಲಿ ಅಲ್ ಹುಸೇನಿ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಅಬ್ದುಲ್ ರಶೀದ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜಹರ್ ಆಲಂ ಖಾನ್, ಕಲಬುರಗಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷೆ ಚಂದ್ರಿಕಾ ಪರಮೇಶ್ವರಿ ಹಾಗೂ ಮಹಾನಗರಪಾಲಿಕೆ ಮಹಾಪೌರ ಯಲ್ಲಪ್ಪ ನಾಯ್ಕೋಡಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

 

ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಕಲಬುರಗಿ ಈಶಾನ್ಯ ವಲಯದ ಪೊಲೀಸ್ ಉಪ ಮಹಾನಿರೀಕ್ಷಕ ಅಜಯ ಹಿಲೋರಿ ಹಾಗೂ ಕಲಬುರಗಿ ವಿಭಾಗದ ಶಾಲಾ ಶಿಕ್ಷಣ ಇಲಾಖೆಯ ಅಪರ ಆಯುಕ್ತ ಡಾ. ಆಕಾಶ ಎಸ್ ಅವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರುವರು.

ಭಾರತ ಸರ್ಕಾರದ ಮಾರ್ಗಸೂಚಿಗಳನ್ವಯ ಅಂದು ಬೆಳಿಗ್ಗೆ 7 ರಿಂದ 7.45 ಗಂಟೆಯವರೆಗೆ ಯೋಗ ಪ್ರದರ್ಶನ ಹಾಗೂ ಬೆಳಿಗ್ಗೆ 7.45 ರಿಂದ 9 ಗಂಟೆಯವರೆಗೆ ವೇದಿಕೆ ಕಾರ್ಯಕ್ರಮ ಜರುಗಲಿದೆ. “ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ” ಎಂಬುವುದು ಈ ವರ್ಷದ ಅಂತರರಾಷ್ಟ್ರೀಯ ಯೋಗದ ದಿನಾಚರಣೆಯ ಘೋಷವಾಕ್ಯವಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ರೌಡಿ ಶೀಟರ್ ಜ್ವಾಲೇಂದ್ರನಾಥ ಕಲಬುರಗಿ ನಗರದಿಂದ ಗಡಿಪಾರು

ಕಲಬುರಗಿ: ಕಲಬುರಗಿ ನಗರದ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ರೌಡಿ...

ಕಲಬುರಗಿ| ಕೆ.ಕೆ.ಆರ್.ಡಿ.ಬಿ. ಮಂಡಳಿ ಕಾರ್ಯದರ್ಶಿಯಾಗಿ ನಲಿನ್ ಅತುಲ್ ಅಧಿಕಾರ ಸ್ವೀಕಾರ

ಕಲಬುರಗಿ: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ನೂತನ ಕಾರ್ಯದರ್ಶಿಯಾಗಿ 2014ರ...

ಕಲಬುರಗಿ| ನಂದೂರು ಸೆಕೆಂಡರಿ ಡಿಸ್ಟಲರಿ ಸೆಂಟರ್ ವೀಕ್ಷಿಸಿದ ಡಿ.ಸಿ. ಫೌಜಿಯಾ ತರನ್ನುಮ್

ಕಲಬುರಗಿ: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಗುರುವಾರ ಕಲಬುರಗಿ ತಾಲೂಕಿನ ನಂದೂರ...

ಕಲಬುರಗಿ| ಸಂಸ್ಥೆಯ ಬೆಳೆಯುವಲ್ಲಿ ಸಾಮಾಜಿಕ ಜಾಲತಾಣಗಳ ಸದ್ಭಳಕೆ ಪಾತ್ರ ದೊಡ್ಡದು: ಉಮಾ ರೇವೂರ 

ಕಲಬುರಗಿ: ಯಾವುದರೊಂದು ಸಂಸ್ಥೆಯು ತನ್ನ ಬೆಳವಣಿಗೆ ಆಗಬೇಕಾದರೆ ಅದು ಸಾಮಾಜಿಕ ಜಾಲತಾಣಗಳನ್ನು...