ಕಲಬುರಗಿ: ಶ್ರೀ ಶರಣಬಸವೇಶ್ವರ ಸಂಸ್ಥಾನದ 8ನೆಯ ಪೀಠಾಧಿಪತಿ, ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳಾಗಿದ್ದ ಡಾ.ಶರಣಬಸವಪ್ಪ ಅಪ್ಪ ನಿಧನದ ಹಿನ್ನೆಲೆ ಅವರ ಅಂತಿಮ ಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಲಾಗಿದೆ.
ಈ ಕುರಿತು ರಾಜ್ಯಸರ್ಕಾರದ ಪರವಾಗಿ ಸಿಆಸುಇ (ರಾಜ್ಯ ಶಿಷ್ಟಾಚಾರ) ಸರ್ಕಾರದ ಅಧೀನ ಕಾರ್ಯದರ್ಶಿ-1(ಪ್ರ) ಬಾಣದರಂಗಯ್ಯ.ಎನ್.ಆರ್ ಅವರು ಅಧಿಸೂಚನೆ ಹೊರಡಿಸಿದ್ದು, ಶ್ರೀ ಶರಣಬಸವಪ್ಪ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 8ನೇ ಪೀಠಾಧಿಪತಿ ಹಾಗೂ ಶ್ರೀ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿಗಳು, ಕಲಬುರಗಿ ಜಿಲ್ಲೆ ಇವರು ದಿನಾಂಕ:14.08.2025ರಂದು ನಿಧನರಾಗಿರುತ್ತಾರೆ. ಸದರಿಯವರ ನಿಧನಕ್ಕೆ ಸರ್ಕಾರವು ತೀವು ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲು ಕರ್ನಾಟಕರಾಜ್ಯಪಾಲರ ಆಜ್ಞಾನುಸಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.