ಕಲಬುರಗಿ| ನಾಗರಿಕ ರಕ್ಷಣಾಗಾಗಿ “ಅಪರೇಷನ್‌ ಅಭ್ಯಾಸ್” ಅಣುಕು ಪ್ರದರ್ಶನ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

Date:

Share post:

ಕಲಬುರಗಿ; “ಅಪರೇಷನ್ ಅಭ್ಯಾಸ್” ನಾಗರಿಕ ರಕ್ಷಣಾ ಕಾರ್ಯಚರಣೆಯ ಅಣುಕು ಪ್ರದರ್ಶನ ಶೀಘ್ರದಲ್ಲಿಯೇ ಕಲಬುರಗಿ ನಗರ ಹಾಗೂ ಜಿಲ್ಲೆಯ ವಿವಿಧ ಕಡೆ ಆಯೋಜಿಸಬೇಕಾಗಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಡಿ.ಸಿ. ಬಿ.ಫೌಜಿಯಾ ತರನ್ನುಮ್ ಅವರು ಸೂಚನೆ ನೀಡಿದರು.

ಬುಧವಾರ ತಮ್ಮ‌ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ಪೂರ್ವಭಾವಿ ಸಭೆ ನಡೆಸಿದ ಅವರು, ಸಂಬಂಧಪಟ್ಟ ಎಲ್ಲಾ ಇಲಾಖೆಯ ಅಧಿಕಾರಿಗಳು ಈ ಅಣುಕು ಪ್ರದರ್ಶನದಲ್ಲಿ ಸಕ್ರಿಯವಾಗಿ ಭಾಗವಹಿಸಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ರಕ್ಷಣಾ ಕಾರ್ಯಚರಣೆ ಯಾವ ರೀತಿಯಾಗಿ ನಡೆಯುತ್ತದೆ ಎಂಬುದರ ಕುರಿತು ಅಣಕು ಪ್ರದರ್ಶನದ‌ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿದೆ ಎಂದರು.

ಶಾಲಾ-ಕಾಲೇಜು, ವಾಣಿಜ್ಯ ಅಂಗಡಿ-ಮುಂಗಟ್ಟುಗಳು ಹಾಗೂ ಕೈಗಾರಿಕೆ ಪ್ರದೇಶದಲ್ಲಿ ನಾಗರಿಕ ರಕ್ಷಣಾ ಕಾರ್ಯಚರಣೆ ಕುರಿತು ಹೆಚ್ಚಿನ ರೀತಿಯಲ್ಲಿ ಜನಜಾಗೃತಿ ಮೂಡಿಸಬೇಕು. ಈ ಕುರಿತು ಎಸ್.ಓ.ಪಿ ಜಾರಿಗೊಳಿಸಬೇಕು ಎಂದು ಪೊಲೀಸ್ ಸೇರಿದಂತೆ ಸಂಬಂಧಪಟ್ಟ ಇಲಾಖೆಗೆ ನಿರ್ದೇಶನ ನೀಡಲಾಯಿತು.

ಇನ್ನು ಕಲಬುರಗಿ ನಗರದಲ್ಲಿ 10 ನಿಮಿಷಗಳ ಕಾಲ ಬ್ಲ್ಯಾಕ್ ಔಟ್ ಮಾಡಲು ನಿರ್ಧರಿಸಿದ್ದು, ಕೂಡಲೆ ಜೆಸ್ಕಾಂ ಮತ್ತು ಕೆ.ಪಿ.ಟಿ.ಸಿ.ಎಲ್ ಅಧಿಕಾರಿಗಳು ಅಗತ್ಯ ಮುಂಜಾಗ್ರತೆ ಕ್ರಮ ಕೈಗೊಂಡು ದಿನಾಂಕ ನಿಗದಿಪಡಿಸಿ ಮೊದಲೆ ಸಾರ್ವಜನಿಕರಿಗೆ ತಿಳಿಸಬೇಕು ಎಂದರು.

ಸಭೆಯಲ್ಲಿ ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಡಿ.ಸಿ.ಪಿ. ಕನಿಕಾ ಸಿಕ್ರಿವಾಲ್, ಡಿ.ಸಿ.ಎಫ್ ಸುಮಿತ್ ಪಾಟೀಲ, ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಸಹಾಯಕ ಆಯುಕ್ತ ಪ್ರಭುರೆಡ್ಡಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....