ಕಲಬುರಗಿ| ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ ಎಂದ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌

Date:

Share post:

ಕಲಬುರಗಿ: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಕರೆ ನೀಡಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, ಸೀಟು ಪಡೆಯಲೇಬೇಕು ಎಂಬ ಆತಂಕದಿಂದ ಮೋಸದ ಜಾಲಕ್ಕೆ ಬೀಳಬಾರದು ಎಂದು ಸಲಹೆ ನೀಡಿದರು.

ವೈದ್ಯಕೀಯ ಸೀಟು ಕೊಡಿಸುತ್ತೀವೆ, ಆ ಕಾಲೇಜಿನಲ್ಲಿ ಸೀಟು ಸಿಗುತ್ತೆ ನಿಮಗೆ, ನಮಗೆ ಅವರು ಗೊತ್ತಿದ್ದಾರೆ, ಇವರು ಗೊತ್ತಿದ್ದಾರೆ ಎಂದು ಹೇಳಿ ಸೀಟು ಕೊಡಿಸುವ ಭರವಸೆ ನೀಡಿ ಮರಳು ಮಾಡುವವರ ಸಂಖ್ಯೆ ಹೆಚ್ಚಾಗಿದೆ ಎಂದು ಸಚಿವರು ತಿಳಿಸಿದರು.

ನೀಟ್‌ ಫಲಿತಾಂಶಗಳು ಈಗಾಗಲೇ ಪ್ರಕಟವಾಗಿವೆ. ಕರ್ನಾಟಕದಲ್ಲಿ 1,47,782 ಅಭ್ಯರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. 1,42,369 ವಿದ್ಯಾರ್ಥಿಗಳು ಹಾಜರಾಗಿದ್ದರು, ಈ ಪೈಕಿ 83,582 ಅರ್ಹತೆ ಪಡೆದುಕೊಂಡಿದ್ದಾರೆ.

ಹೇಗಾದರೂ ಮಾಡಿ ಒಳ್ಳೆ ಕಾಲೇಜಿನಲ್ಲಿ ಸೀಟು ಪಡೆಯಬೇಕು ಎಂಬ ಆತುರಕ್ಕೆ ಬರಬೇಡಿ. ನಿಮ್ಮ ಆತಂಕವನ್ನು ದುರುಪಯೋಗಪಡಿಸಿಕೊಳ್ಳಲು ಮಧ್ಯವರ್ತಿಗಳು ಕಾದಿರುತ್ತಾರೆ. ಅವರ ಮೋಸದ ಜಾಲಕ್ಕೆ ಬೀಳಬೇಡಿ ಎಂದು ಸಚಿವರು ಸಲಹೆ ನೀಡಿದ್ದಾರೆ.

ಕೆಇಎಯಿಂದ ಸೀಟು ಹಂಚಿಕೆ:

ನಮ್ಮ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದಲೇ ಸೀಟುಗಳ ಹಂಚಿಕೆ ಕ್ರಮಬದ್ಧವಾಗಿ ಆಗುತ್ತದೆ. ಅದರಂತೆ ನಿಯಮಗಳನ್ನು ಪಾಲಿಸಿ. ವಿದ್ಯಾರ್ಥಿಗಳು ಮತ್ತು ಪೋಷಕರು ಇದನ್ನು ತಪ್ಪದೇ ತಿಳಿದುಕೊಳ್ಳಬೇಕು ಎಂದು ಸಚಿವರು ವಿವರಿಸಿದ್ದಾರೆ.

ಅತ್ಯುತ್ತಮ ಸಾಧನೆ ಮಾಡಿ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ, ಎಲ್ಲ ವಿದ್ಯಾರ್ಥಿಗಳ ಭವಿಷ್ಯವೂ ಉತ್ತಮವಾಗಿರಲಿ ಎಂದು ಹಾರೈಸುತ್ತೇನೆ ಎಂದು ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ.

ದಲ್ಲಾಳಿಗಳಿಗೆ ಎಚ್ಚರಿಕೆ:

ಸೀಟು ಕೊಡಿಸುತ್ತೇನೆಂದು ವಿದ್ಯಾರ್ಥಿಗಳು ಅಥವಾ ಪೋಷಕರನ್ನು  ದಿಕ್ಕು ತಪ್ಪಿಸಿ ಮೋಸ ಮಾಡಿದವರು ಕಂಡುಬಂದರೆ, ಅಂಥ ದಲ್ಲಾಳಿಗಳನ್ನು ಪತ್ತೆ ಹಚ್ಚಿ, ಕಾನೂನು ರೀತಿಯಲ್ಲಿ ಕಠಿಣ ಕ್ರಮ ಜಾರಿಗೊಳಿಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರ ಭವಿಷ್ಯದ ಜೊತೆ ಚೆಲ್ಲಾಟವಾಡುವುದನ್ನು ಸಹಿಸುವುದಿಲ್ಲ. ಮಧ್ಯವರ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಿಗೆ ನೌಕರರ ಮುಷ್ಕರ: ಕಲಬುರಗಿಯಲ್ಲಿ ಪರದಾಡಿದ ಪ್ರಯಾಣಿಕರು

ಕಲಬುರಗಿ: ವೇತನ ಪರಿಷ್ಕರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ...

ಕಲಬುರಗಿ| ವಿವಿಧ ಕ್ಷೇತ್ರದ ಸಾಧಕರಿಗೆ ‘ನಡೆ ಚೆನ್ನ ಪ್ರಶಸ್ತಿ’ ಪ್ರದಾನ

ಕಲಬುರಗಿ: ಭಾರತ ದೇಶವೇ ಬಸವ ಸಂಸ್ಕೃತಿ ಹಂಬಲಿಸುತ್ತಿರುವಾಗ ಕರ್ನಾಟಕ ಸರ್ಕಾರ ಬಸವಣ್ಣ...

ಕಲಬುರಗಿ| ದಲಿತ ವಿದ್ಯಾರ್ಥಿನಿಯ ಆತ್ಮಹತ್ಯೆ ಪ್ರಕರಣ ಉನ್ನತಮಟ್ಟದ ತನಿಖೆಗೆ ಡಿ.ಜಿ ಸಾಗರ್ ಆಗ್ರಹ

ಕಲಬುರಗಿ: ಇಲ್ಲಿನ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಎನ್ನಲಾಗಿರುವ ದಲಿತ...

ಕಲಬುರಗಿ| ಗ್ರಾಮ ಪಂಚಾಯತಿ ಅಧಿಕಾರಿ, ಸಿಬ್ಬಂದಿ ಕೌನ್ಸಿಲ್ ಪ್ರಕ್ರಿಯೆ ಪೂರ್ಣ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: 2024–25ನೇ ಸಾಲಿನ ಆಯವ್ಯಯ ಘೋಷಣೆಯಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್‌...