ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿಯ ಆವರಣದಲ್ಲಿರುವ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸ್ನಾತಕೋತ್ತರ ವಿದ್ಯಾರ್ಥಿಗಳ ವಸತಿ ನಿಲಯದ ನೂತನ ನಿಲಯ ಪಾಲಕರಾಗಿ ವಿನೋದ್ ಕುಮಾರ್ ನೇಮಕಗೊಂಡ ಹಿನ್ನೆಲೆಯಲ್ಲಿ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ನಿಲಯ ಅಧ್ಯಕ್ಷರಾದ ರಾಚಯ್ಯಸ್ವಾಮಿ ಹಿರೇಮಠ, ಉಪಾಧ್ಯಕ್ಷರಾದ ಶಾಂತಕುಮಾರ್ ಮತ್ತು ವಸತಿ ನಿಲಯದ ಎಲ್ಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.