ಕಲಬುರಗಿ| ಬಾಲಕಾರ್ಮಿಕತೆ ನಿರ್ಮೂಲನೆಗೆ ಎಲ್ಲರ ಪ್ರಯತ್ನ ಅಗತ್ಯ: ಸಂಗೀತಾ ಸಡಕೀನ 

Date:

Share post:

ಕಲಬುರಗಿ: ಶಿಕ್ಷಣದಿಂದ ವಂಚಿತಗೊಂಡು ದುಡಿಮೆಯಲ್ಲಿ ತೊಡಗಿರುವ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರೆಲ್ಲರೂ ಸಂಘಟಿತರಾಗಿ ಪ್ರಯತ್ನಿಸಬೇಕಿದೆ ಎಂದು ಎಂ. ಎಸ್. ಇರಾಣಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸಂಗೀತಾ ಸಡಕೀನ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್.ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಕುಟುಂಬದಲ್ಲಿನ ಬಡತನ, ಅನಕ್ಷರತೆ, ಶಿಕ್ಷಣದ ಮಹತ್ವದ ಕುರಿತು ಅರಿವಿಲ್ಲದಿರುವುದು, ವಲಸೆ ಹೋಗುವುದು, ತೀವ್ರತರಹದ ಕಾಯಿಲೆಯಿಂದ ಬಳಲುತ್ತಿರುವ ಪೋಷಕರು, ಅಸ್ಪೃಶ್ಯತೆ ಹೀಗೆ ಅನೇಕ ಕಾರಣಗಳಿಂದ ಮಕ್ಕಳು ಶಾಲೆಗೆ ಹೋಗದೇ ಕೆಲಸಕ್ಕೆ ಹೋಗಿ ಬಾಲಕಾರ್ಮಿಕರಾಗುತ್ತಾರೆ. ಮಕ್ಕಳ ರಕ್ಷಣೆ ಹಾಗೂ ಅವರಿಗೆ ಕಡ್ಡಾಯವಾಗಿ ಶಿಕ್ಷಣ ಒದಗಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ’ ಎಂದರು

ಬಾಲ ಕಾರ್ಮಿಕ ಪದ್ಧತಿಯಿಂದ ಆಗುವ ದುಷ್ಪರಿಣಾಮ ಕುರಿತು ಪೋಷಕರಲ್ಲಿ ಅರಿವು ಮೂಡಿಸಿ, ಬಾಲ ಕಾರ್ಮಿಕತೆಯನ್ನು ನಿರ್ಮೂಲನೆ ಮಾಡಬೇಕು. ಮಕ್ಕಳಿಗೆ ಅವರ ಹಕ್ಕುಗಳ ಕುರಿತು ತಿಳಿವಳಿಕೆ ನೀಡಬೇಕು. ತಂದೆ ತಾಯಿಗಳು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಉಪನ್ಯಾಸಕರಾದ ಆನಂದ ಕೊಪ್ಪದ ಬಾಲಕಾರ್ಮಿಕ ಪದ್ಧತಿ ವಿರೋಧಿ ಪ್ರಮಾಣ ವಚನ ಬೋಧಿಸಿದರು.

ಹಿರಿಯ ಉಪನ್ಯಾಸಕರಾದ ಕೃಷ್ಣವೇಣಿ ಪಾಟೀಲ್ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಕಾಲೇಜಿನ ಎಲ್ಲ ಸಿಬ್ಬಂದಿಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...