ಕಲಬುರಗಿ| ಬಾಲಕಿಯರ ಬಾಲ ಮಂದಿರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ; ಪರಿಶೀಲನೆ

Date:

Share post:

ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದ ಆಳಂದ್ ಚೆಕ್ ಪೋಸ್ಟ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಅವರು ಅಲ್ಲಿನ ಮಕ್ಕಳೊಂದಿಗೆ ಸಂವಾದ ನಡೆಸಿ, ಕೇಂದ್ರಕ್ಕೆ ಬೇಕಾಗುವ ಎಲ್ಲ ಸೌಲಭ್ಯ ಒದಗಿಸುವುದ ಜೊತೆಗೆ ಅವರ ಉಜ್ವಲ ಭವಿಷ್ಯಕ್ಕೆ ಅಗತ್ಯವಿರುವ ಎಲ್ಲ ಕ್ರಮವಹಿಸುವುದಾಗಿ ಹೇಳಿದರು.

ಬಾಲಕಿಯರಿಗೆ ಶೈಕ್ಷಣಿಕ ಪ್ರವಾಸಕ್ಕೆ ಕಳಿಸುವುದಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.

ಬಾಲಕಿಯರ ವಸತಿ ಗೃಹ, ಊಟದ ಮನೆ ಇತ್ಯಾದಿಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕಿ ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ, ಸಿಇಓ ಭoವಾರ ಸಿಂಗ್, ಮಜಹರ್ ಖಾನ್ ಆಲಂ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಪ್ರಕರಣ; ಮೃತದೇಹ ಪತ್ತೆ 

ಕಲಬುರಗಿ: ಪ್ರೀಯಕರನ ಕಿರುಕುಳಕ್ಕೆ ಬೇಸತ್ತು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ...

ಕಲಬುರಗಿ: ಜುಲೈ 23 ರಿಂದ 27 ರವರೆಗೆ ನೀರು ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ನಗರಕ್ಕೆ ನೀರು ಸರಬರಾಜು ಮಾಡುವ ಜಲಮೂಲ ನದಿಗಳಲ್ಲಿ ಒಂದಾದ...

ಕಲಬುರಗಿ| ಜು.25 ರಿಂದ ಗುಡ್ಡಾಪೂರ ದಾನಮ್ಮ ದೇವಿ ಪುರಾಣ ಪ್ರಾರಂಭ: ಸಿರಗಾಪೂರ

ಕಲಬುರಗಿ: ಪ್ರತಿ ವರ್ಷದಂತೆ ಶಿವಮಂದಿರ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಜಯನಗರ ಶಿವಮಂದಿರದಲ್ಲಿ...

ಕಲಬುರಗಿ| ಕಲ್ಯಾಣ ಕರ್ನಾಟಕ ಸುಸ್ಥಿರ ಅಭಿವೃದ್ಧಿಗೆ ಡಿ.15ರಂದು ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಕೆ: ಬಿ.ಆರ್.ಪಾಟೀಲ್

ಕಲಬುರಗಿ: ರಾಜ್ಯದಲ್ಲಿ ಮಾನವ ಅಭಿವೃದ್ಧಿ ಹಾಗೂ ಸುಸ್ಥಿರ ಜಿಲ್ಲಾ ಅಭಿವೃದ್ದಿ ಯೋಜನೆ...