ಕಲಬುರಗಿ: ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನ

Date:

Share post:

ಕಲಬುರಗಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ 2025-26ನೇ ಸಾಲಿಗೆ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಹ ವಿದ್ಯಾರ್ಥಿಗಳು https://shp.karnataka.gov.in/bcwd ವೆಬ್‍ಸೈಟ್‍ದಲ್ಲಿ ಆನ್‍ಲೈನ್ ಮೂಲಕ 2025ರ ಜೂನ್ 16 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖೆಯ https://bcwd.karnataka.gov.in ವೆಬ್‍ಸೈಟ್‍ನ್ನು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ ಇ-ಮೇಲ್ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸಲು ಹಾಗೂ ಸಹಾಯವಾಣಿ ಸಂಖ್ಯೆ 8050770004 ಹಾಗೂ 8050770005 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕನ್ನಡದ ಖ್ಯಾತ ಲೇಖಕಿ ಬಾನು ಮುಷ್ತಾಕ್‌’ಗೆ ಬೂಕರ್ ಪ್ರಶಸ್ತಿ

ಕಲಬುರಗಿ / ಬೆಂಗಳೂರು : ವಕೀಲೆ , ಕನ್ನಡದ ಖ್ಯಾತ ಲೇಖಕಿ...

ಕಲಬುರಗಿ| ಜೈಲಿನಲ್ಲಿ ಜಾಮರ್ ಅಳವಡಿಕೆ; ಪ್ರಿಕ್ವೆಸ್ಸಿ ಕಡಿಮೆ ಮಾಡುವಂತೆ ಆಗ್ರಹ

ಕಲಬುರಗಿ : ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಜಾಮರ್ ಅಳವಡಿಕೆ ಮಾಡಲಾಗಿದ್ದು,...

ಕಲಬುರಗಿ: ಚಿಂಚೋಳಿಯಲ್ಲಿ ಅಕಾಲಿಕ ಮಳೆ; ಮನೆ ಕುಸಿತ

ಕಲಬುರಗಿ: ಕಳೆದ ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮನೆಯೊಂದು ಕುಸಿದು ಬಿದ್ದಿರುವ ಘಟನೆ...

ಕಲಬುರಗಿ: ಮೇ 23 ರಂದು ನೇರ ಸಂದರ್ಶನ

ಕಲಬುರಗಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕಲಬುರಗಿ ಸರ್ಕಾರಿ ಐಟಿಐ...