ಕಲಬುರಗಿ| ಮೇ 21 ರಂದು ಮಿನಿ ಉದ್ಯೋಗ ಮೇಳ ಆಯೋಜನೆ

Date:

Share post:

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಮೇ 21ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

     ಮಣಪ್ಪುರಂ ಫೈನಾನ್ಸ್‍ದಲ್ಲಿ ಸೆಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 32 ವರ್ಷಗೊಳಗಿರಬೇಕು. ಎಲ್.ಐ.ಸಿ. ಯಲ್ಲಿ ಕರಿಯರ್ ಏಜೆಂಟ್(ಮಹಿಳೆ) ಹುದ್ದೆಗೆ ಪಿಯುಸಿ/ ಐಟಿಐ/ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಲಾಹೋಟಿ ಮೋಟಾರ್ಸ್‍ದಲ್ಲಿ ರಿಲೇಷನ್‍ಶಿಫ್ ಮ್ಯಾನೇಜರ್ ಹುದ್ದೆಗೆ ಮತ್ತು ಕಮರ್ಶಿಯಲ್ ಎಕ್ಸಿಕ್ಯೊಟಿವ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.  ರಿಸೆಪ್‍ನಿಷ್ಟ್/ ಶೋ-ರೂಂ ಹೊಸ್ಟ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.

ಟೇಕ್ಸ್‍ಪೊರ್ಟ ಸಿಂಡಿಕೇಟ್‍ದಲ್ಲಿ ಟೈಲರ್ಸ್ ಹಾಗೂ ಆಪರೇಟರ್ಸ್ ಹುದ್ದೆಗಳಿಗೆ 8ನೇ ತರಗತಿ ಮತ್ತು ಎಸ್.ಎಸ್.ಎಲ್ ಸಿ. ಪಾಸಾಗಿರಬೇಕು. ವಯೋಮಿತಿ 18 ರಿಂದ 50 ವರ್ಷದೊಳಗಿರಬೇಕು. ಸ್ವತಂತ್ರ ಮೈಕ್ರೋ ಫೈನಾನ್ಸ್‍ದಲ್ಲಿ ಕಲೆಕ್ಷನ್ ಆಫೀಸರ್ ಹಾಗೂ ಫೀಲ್ಡ್ ಆಫೀಸರ್ ಹುದ್ದೆಗೆ ಪಿಯುಸಿ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 28 ವರ್ಷದೊಳಗಿರಬೇಕು.

        ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡೆÀಟಾ) ಭಾವಚಿತ್ರಗಳು ಹಾಗೂ ಆಧಾರ್‍ಕಾರ್ಡ್‍ದೊಂದಿಗೆ ಮೇಲ್ಕಂಡ ದಿನದಂದು ನಡೆಯುವ ಮಿನಿ ಉದ್ಯೋಗಮೇಳದಲ್ಲ್ಲಿ ಭಾಗವಹಿಸಬೇಕು. ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಗೆ ಸಂಪರ್ಕಿಸಲು ಕೋರಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...