ಕಲಬುರಗಿ| ಮೊಹರಂ ಹಬ್ಬ ಆಚರಣೆ ಪ್ರಯುಕ್ತ ಮದ್ಯ ಮಾರಾಟ ನಿಷೇಧಿಸಿ ಡಿ.ಸಿ. ಆದೇಶ

Date:

Share post:

ಕಲಬುರಗಿ: ಮೊಹರಂ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ ಬಿ. ಫೌಜಿಯಾ ತರನ್ನುಮ್ ಅವರು ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರ ಹೊರತುಪಡಿಸಿ) 2025ರ ಜುಲೈ 5ರ ರಾತ್ರಿ 11 ಗಂಟೆಯಿಂದ ಜುಲೈ 8ರ ಬೆಳಗಿನ 6 ಗಂಟೆಯವರೆಗೆ ಎಲ್ಲಾ ತರಹದ ಮದ್ಯ ಮಾರಾಟ, ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಕಲಬುರಗಿ ಜಿಲ್ಲೆಯಾದ್ಯಂತ (ಕಲಬುರಗಿ ನಗರ ಹೊರತುಪಡಿಸಿ) ಎಲ್ಲಾ ತರಹದ ಮದ್ಯಪಾನ, ಸರಾಯಿ, ಶೆಂಧಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ ಮತ್ತು ಮಾದಕ ವಸ್ತುಗಳ ಮಾರಾಟ, ಸಾಗಾಟ ಹಾಗೂ ಮದ್ಯಮಾನವನ್ನು ನಿಷೇಧಿಸಿ, ಮದ್ಯದ ಅಂಗಡಿ ಹಾಗೂ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ.

ಈ ಮೊಹರಂ ಹಬ್ಬದ ಆಚರಣೆ ಸಂದರ್ಭದಲ್ಲಿ ಶಾಂತಿ, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಕರ್ನಾಟಕ ಅಬಕಾರಿ ಕಾಯ್ದೆ 1965ರ ಕಲಂ 21ರ ಅನ್ವಯ ಈ ಆದೇಶ ಹೊರಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಭೀಕರ ಅಪಘಾತ| ದಂಪತಿ ಸೇರಿ ನಾಲ್ವರು ಸಾವು; ಓರ್ವ ಗಂಭೀರ ಗಾಯ

ಕಲಬುರಗಿ/ಬೆಳಗಾವಿ: ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ಹೊರವಲಯದಲ್ಲಿ ನಡೆದ ಭೀಕರ ರಸ್ತೆ...

ಕಲಬುರಗಿ| ಡಾ.ಫ.ಗು. ಹಳಕಟ್ಟಿ ಅವರಿಂದ ವಚನ ಸಾಹಿತ್ಯ ಮರು ಹುಟ್ಟು: ಡಾ. ಹೂವಿನಭಾವಿ

ಕಲಬುರಗಿ: ವಚನ ಸಂಶೋಧನಾ ಪಿತಾಮಹ ಡಾ. ಫ ಗು ಹಳಕಟ್ಟಿ ಅವರ...

ಕಲಬುರಗಿ| ಜುಲೈ 7 ರಂದು ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ

ಕಲಬುರಗಿ: ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದಲ್ಲಿ ಬರುವ...

ಕಲಬುರಗಿ| ಜುಲೈ 8 ರಂದು ಮಿನಿ ಉದ್ಯೋಗ ಮೇಳ

ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಇದೇ ಜುಲೈ...