ಕಲಬುರಗಿ| ಯೋಗದಿಂದ ಆರೋಗ್ಯದ ಭಾಗ್ಯ: ಐ.ಕೆ ಪಾಟೀಲ್ 

Date:

Share post:

ಕಲಬುರಗಿ: ಯೋಗವು ಭಾರತೀಯ ಸಂಸ್ಕ್ರತಿಯ ಮೂಲ. ವಿಶ್ವಕ್ಕೆ ನಮ್ಮ ದೇಶದ ಪರಿಚಯ ಆಗಿರುವುದೇ ಯೋಗ ಮತ್ತು ಅಧ್ಯಾತ್ಮಿಕತೆಯಿಂದ. ಆರೋಗ್ಯ ವೃದ್ಧಿಸುವ ಸಾಧನವೆಂದರೆ ಯೋಗ ಮಾತ್ರ ಎಂದು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಮಾಧ್ಯಮ ಸಂಯೋಜಕ ಐ.ಕೆ ಪಾಟೀಲ್ ಹೇಳಿದರು.

ಅವರು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ 11 ನೇಯ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಶಾರೀರಿಕ ರೋಗಗಳನ್ನು ತಡೆಗಟ್ಟಲು ಬಹಳಷ್ಟು ಸಂಶೋಧನೆಯನ್ನು ಮಾಡಿ ಯೋಗ ಒಂದು ದಿವ್ಯ ಜೌಷಧ ಎಂದು ಅಭಿಪ್ರಾಯಕ್ಕೆ ಬಂದಿದ್ದಾರೆ. ಚಿಕ್ಕವರಿಂದ ದೊಡ್ಡವರು ಯೋಗ ಪ್ರಾಣಾಯಮ ಮಾಡಿ ಆರೋಗ್ಯವನ್ನು ಕಾಪಾಡಿಕೊಳ್ಳಬೇಕೆಂದರು.

 

ಭಾರತದಿಂದ ಬಂದ ಪ್ರಾಚೀನ ಅಭ್ಯಾಸವಾದ ಯೋಗವನ್ನು ಈಗ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ಪ್ರಪಂಚದಾದ್ಯಂತ ಅನುಸರಿಸಲಾಗುತ್ತಿದೆ. ಇದು ದೇಹ ಮತ್ತು ಮನಸ್ಸು ಎರಡಕ್ಕೂ ಸಹಾಯ ಮಾಡುತ್ತದೆ, ಇದು ವ್ಯಾಯಾಮದ ಸಂಪೂರ್ಣ ರೂಪವಾಗಿದೆ. ಪ್ರತಿ ವರ್ಷ ಜೂನ್ 21 ರಂದು, ಪ್ರಪಂಚದಾದ್ಯಂತ ಜನರು ದೈನಂದಿನ ಜೀವನದಲ್ಲಿ ಅದರ ಪ್ರಯೋಜನಗಳನ್ನು ಗುರುತಿಸಲು ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸುತ್ತಾರೆ ಎಂದು ಹೇಳಿದರು.

ಈ ವರ್ಷದ ಘೋಷವಾಕ್ಯ “ಒಂದು ಭೂಮಿಗಾಗಿ ಯೋಗ, ಒಂದು ಆರೋಗ್ಯ”, ಇದು ಮಾನವರು, ಪ್ರಕೃತಿ ಮತ್ತು ಒಟ್ಟಾರೆ ಯೋಗಕ್ಷೇಮದ ನಡುವೆ ಸಾಮರಸ್ಯವನ್ನು ಉತ್ತೇಜಿಸುವಲ್ಲಿ ಯೋಗದ ಪಾತ್ರವನ್ನು ಒತ್ತಿಹೇಳುತ್ತದೆ. ಈ ಜಾಗತಿಕ ಆಚರಣೆಯ 11 ನೇ ವಾರ್ಷಿಕೋತ್ಸವವನ್ನು ಗುರುತಿಸುವುದರಿಂದ 2025 ವರ್ಷವು ವಿಶೇಷವಾಗಿ ವಿಶೇಷವಾಗಿದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಶಿಲ್ಪಾ ಅಲ್ಲದ ವಹಿಸಿದ್ದರು. ಯೋಗ ಪಟು ನಾಗರಾಜ್ ಯೋಗ ಹೇಳಿಕೊಟ್ಟರು. ಉಪನ್ಯಾಸಕರಾದ ಚಂದ್ರಶೇಖರ ಪಟ್ಟಣಕರ, ಅಶ್ವಿನಿ ಪಾಟೀಲ್, ಮಧುಶ್ರೀ ಘಂಟಿ, ಶ್ವೇತಾ ಶೆಟ್ಟಿ,, ಮಲಕಮ್ಮ ಪಾಟೀಲ್ ಉಪಸ್ಥಿತರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....