ಬೆಂಗಳೂರು: ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಡಾ. ರಾಧಾ ಮೋಹನ್ ದಾಸ್ ಅಗರವಾಲ್ ಅವರನ್ನು ಭಾನುವಾರ ಬೆಂಗಳೂರಿನಲ್ಲಿ ಕಲಬುರಗಿ ಜಿಲ್ಲೆಯ ಬಿಜೆಪಿ ನಾಯಕರು ಸ್ವಾಗತಿಸಿ, ಸನ್ಮಾನಿಸಿದರು.
ಈ ವೇಳೆ ಜಿಲ್ಲೆಯಲ್ಲಿನ ಬಿಜೆಪಿ ಪಕ್ಷದ ಸಂಘಟನೆ, ಬಲವರ್ಧನೆ ಹಾಗೂ ಮುಂದಿನ ಹೋರಾಟಗಳ ಬಗ್ಗೆ ಸಮಗ್ರವಾಗಿ ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಮಾಜಿ ಸಂಸದರಾದ ಡಾ.ಉಮೇಶ ಜಾಧವ್, ವಕ್ತಾರರಾದ ರಾಜಕುಮಾರ್ ಪಾಟೀಲ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಅಶೋಕ್ ಬಗಲಿ, ನಗರ ಅಧ್ಯಕ್ಷರಾದ ಚಂದು ಪಾಟೀಲ್, ಶಾಸಕರಾದ ಬಸವರಾಜ್ ಮತ್ತಿಮಡು, ವಿಧಾನ ಪರಿಷತ್ ಸದಸ್ಯ ಶಶೀಲ ನಮೋಶಿ, ಡಾ.ಬಿ.ಜಿ.ಪಾಟೀಲ್, ಮಾಜಿ ಶಾಸಕರಾದ ಸುಭಾಷ ಗುತ್ತೇದಾರ್, ದತ್ತಾತ್ರೇಯ ಪಾಟೀಲ್ ರೇವೂರ, ಪಕ್ಷದ ಪ್ರಮುಖರಾದ ಸಿದ್ದಾಜಿ ಪಾಟೀಲ್, ಉಮೇಶ್ ಪಾಟೀಲ್, ಶಿವಯೋಗಿ ನಾಗನಹಳ್ಳಿ ಉಪಸ್ಥಿತರಿದ್ದರು.