ಕಲಬುರಗಿ| ವಿದ್ಯಾರ್ಥಿನಿಯರ ಪ್ರತಿಭೆ ಪ್ರೋತ್ಸಾಹಿಸಲು ಗೋಡೆ ಪತ್ರಿಕೆ ಸಹಕಾರಿ: ಡಾ. ಸತ್ಯಂಪೇಟೆ

Date:

Share post:

ಕಲಬುರಗಿ: ಇಂದಿನ ಆಧುನಿಕ ಯುಗದಲ್ಲಿ ಎಲ್ಲ ವಿದ್ಯಾರ್ಥಿಗಳು ಕೇವಲ ಮೊಬೈಲ್ ವಶಕ್ಕೆ ಸಿಲುಕಿದ್ದಾರೆ, ಇಂತಹ ಸಂದರ್ಭದಲ್ಲಿ ಕಾಲೇಜಿನ ಗೋಡೆ ಪತ್ರಿಕೆ ವಿದ್ಯಾರ್ಥಿಗಳ ಪ್ರತಿಭೆಯನ್ನು ಪ್ರೋತ್ಸಾಹಿಸಲು ಸಹಕಾರಿ ಎಂದು ಸಾಹಿತಿ ಡಾ. ಶಿವರಂಜನ ಸತ್ಯಂಪೇಟೆ ಹೇಳಿದರು.

ಹೈದರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆಯ ಶ್ರೀಮತಿ ವೀರಮ್ಮ ಗಂಗಸಿರಿ ಮಹಿಳಾ ಮಹಾವಿದ್ಯಾಲಯದ ಕನ್ನಡ ವಿಭಾಗದವರು ಸಂಚಾಲಿತ “ಮುಕ್ತ ಮನಸು” ಗೋಡೆ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.

ಮುಂದುವರೆದು ಮಾತನಾಡುತ್ತಾ, ಕನ್ನಡ ವಿಭಾಗದವರು ಈ ಕಾಲೇಜಿನ ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರತರಲು ಈ ತರಹದ ಪ್ರಯೋಗ ಮಾಡುತ್ತಿರುವುದು ಶ್ಲಾಘನೀಯ ಎಂದರು.

ನಮ್ಮ ಕಾಲೇಜಿನಲ್ಲಿ ಈ ರೀತಿಯ ಪ್ರಯೋಗ ಮೊದಲು ಹಿಂದಿ ವಿಭಾಗದ ವತಿಯಿಂದ ಆರಂಭಿಸಲಾಯಿತು. ಅವರಿಂದ ಪ್ರೋತ್ಸಾಹ ಪಡೆದು ಕನ್ನಡ ವಿಭಾಗದವರು ಮುಕ್ತ ಮನಸು ಗೋಡೆ ಪತ್ರಿಕೆ ಆರಂಭಿಸಿರುವುದು ವಿದ್ಯಾರ್ಥಿಗಳ ಸರ್ವೋತಮುಖ ಬೆಳವಣಿಗೆಗೆ ಸಹಕಾರಿ ಎಂದು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡ ಕಾಲೇಜಿನ ಪ್ರಾಚಾರ್ಯರಾದ ಡಾ.ರಾಜೇಂದ್ರ ಕೊಂಡಾ ತಿಳಿಸಿದರು.

 

ಕನ್ನಡ ವಿಭಾಗದ ಮುಖ್ಯಸ್ಥರಾದ ಕವಿತಾ ಅಶೋಕ ಅವರು ಅತಿಥಿಗಳಿಗೆ ಸ್ವಾಗತ ಮಾಡಿದರು. ಬಸಮ್ಮ ಗೊಬ್ಬರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ದಾನಮ್ಮ ಕೋರವಾರ ಅವರು ವಂದಿಸಿದರು.

 

ಕಾರ್ಯಕ್ರಮದಲ್ಲಿ ಕಾಲೇಜಿನ ಉಪ ಪ್ರಾಚಾರ್ಯರಾದ ಪ್ರೊ. ವೀಣಾ ಎಚ್. ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ.ಪ್ರೇಮಚಂದ ಚವ್ಹಾಣ, ಸಮಾಜಶಾಸ್ತ್ರದ ಮುಖ್ಯಸ್ಥರಾದ ಡಾ.ಮಹೇಶ ಗಂವ್ಹಾರ, ಆಯಿಕ್ಯೂಎಸಿ ಸಂಯೋಜಕರಾದ ಡಾ. ಶಿವರಾಜ ಜಿ., ಡಾ. ಜ್ಯೋತಿಪ್ರಕಾಶ ದೇಶಮುಖ, ಡಾ.ಸವಿತಾ, ಶಿವಲೀಲಾ ಧೋತ್ರ, ಡಾ. ಮೋಹಸೀನಾ, ಸುಷ್ಮಾ ಕುಲಕರ್ಣಿ, ಡಾ. ರಾಜೇಶ, ಗೀತಾ ಪಾಟೀಲ, ವಿವಿಧ ವಿಭಾಗಗಳ ಉಪನ್ಯಾಸಕರು ಮತ್ತು ಕನ್ನಡ ವಿಭಾಗದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....