ಕಲಬುರಗಿ: ರಾಜ್ಯದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ ಆರ್. ಪಾಟೀಲ್ ಅವರು ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಜೂನ್ 6 ರಂದು ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಕಲಬುರಗಿಗೆ ಆಗಮಿಸುವರು.
ನಂತರ ಬೆಳಿಗ್ಗೆ 10 ಗಂಟೆಗೆ ಕಲಬುರಗಿಯ ಪೂಜ್ಯ ಬಸವರಾಜಪ್ಪ ಅಪ್ಪ ಮೆಮೋರಿಯಲ್ ಹಾಲ್‍ದಲ್ಲಿ ಕಲಬುರಗಿ ಮಹಾನಗರಪಾಲಿಕೆಯ ಪೌರಕಾರ್ಮಿಕರ ಗುತ್ತಿಗೆ ಪದ್ಧತಿಯನ್ನು ರದ್ದುಪಡಿಸಿ ಅವರ ನೇರ ಪಾವತಿ ಯಡಿಯಲ್ಲಿ ಸಭಾಂವನೆ ಪಾವತಿಸುವ ಆದೇಶ ನೀಡುವ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 1.30 ಗಂಟೆಗೆ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಭಾರತೀಯ ಸೇನಾ ಆಯ್ಕೆ ಪೂರ್ವ ತರಬೇತಿಯ ಚಾಲನೆ ಮತ್ತು ಪ್ರಶಿಕ್ಷಣಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಮಧ್ಯಾಹ್ನ 3 ಗಂಟೆಗೆ ಸೇಡಂ ತಾಲೂಕು ಪಂಚಾಯತ್ ಆವರಣದಲ್ಲಿ ಹಮ್ಮಿಕೊಳ್ಳಲಾದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 4 ಗಂಟೆಗೆ ಸುಲೇಪೇಟ್‍ದಲ್ಲಿ ಡಾ. ಬಾಬು ಜಗಜೀವನರಾಮ್‍ರವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5 ಗಂಟೆಗೆ ಚಿಂಚೋಳಿಯ ವೈಜನಾಥ ಕಲ್ಯಾಣ ಮಂಟಪ ಆವರಣದಲ್ಲಿ 892ನೇ ಬಸವ ಜಯಂತಿ (ಧರ್ಮಸಭೆ) ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 7 ಗಂಟೆಗೆ ಚಿಂಚೋಳಿಯಿಂದ ರಸ್ತೆ ಮೂಲಕ ಬೀದರಿಗೆ ಪ್ರಯಾಣಿಸುವರು.