ಕಲಬುರಗಿ: ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಬಸವರಾಜ ಬಳುಂಡಗಿ ತಿಳಿಸಿದ್ದಾರೆ.
ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ-31ರ ಒಳಗಾಗಿ ಆನ್‌ಲೈನ್ ಮೂಲಕ https://ksgeanews.blogspot.com ಅರ್ಜಿ ಸಲ್ಲಿಸಬೇಕೆಂದು ಕೋರಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ ತಾಲೂಕಾ ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ತಿಳಿಸಿದ್ದಾರೆ.