ಕಲಬುರಗಿ: 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಘೋಷಿಸಿರುವಂತೆ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹಗಳ ವೆಚ್ಚಗಳಿಗಾಗಿ ಪ್ರತಿ ಜೋಡಿಗೆ 50,000 ರೂ.ಗಳನ್ನು ನೀಡಲಾಗುತ್ತದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಧು-ವರರು ಕರ್ನಾಟಕ ರಾಜ್ಯಕ್ಕೆ ಸೇರಿದ ಅಲ್ಪಸಂಖ್ಯಾತರ ಸಮುದಾಯಗಳಿಗೆ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ಸೇರಿದವರಾಗಿರಬೇಕು. ಜಿಲ್ಲಾ ನೋಂದಣಿ/ ವಕ್ಫ್ ಬೋರ್ಡ್ ಕಚೇರಿಗಳಲ್ಲಿ ಸಾಮೂಹಿಕ ವಿವಾಹಗಳ ಆಯೋಜಕರೆಂದು ನೋಂದಣಿಯಾಗಿರುವ ಖಾಸಗಿ ಟ್ರಸ್ಟ್‍ಗಳು, ದೇವಸ್ಥಾನದ ಟ್ರಸ್ಟ್‍ಗಳು, ಸಂಘಗಳು, ಸೊಸೈಟಿಗಳು, ವಕ್ಫ್ ಸಂಸ್ಥೆಗಳು ಮತ್ತು ಖಾಸಗಿ ವ್ಯಕ್ತಿಗಳು ನಡೆಸುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳಲ್ಲಿ ವಿವಾಹವಾದಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಷರತ್ತು ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳಾದ ಆಳಂದ-9742305668, ಅಫಜಲಪೂರ-9742305668, ಚಿಂಚೋಳಿ-8971524009, ಸೇಡಂ-8618788905, ಚಿತ್ತಾಪೂರ-9972554852, ಜೇವರ್ಗಿ-9845036156 ಹಾಗೂ ಕಲಬುರಗಿ-9742305668 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.