ಕಲಬುರಗಿ: ಜಿಲ್ಲೆಯಲ್ಲಿ ಭಾರೀ ಮಳೆಯ ಆರ್ಭಟ ಮಂಗಳವಾರ ಕೂಡ ಮುಂದುವರೆದಿದ್ದು, ಇದೇ ವೇಳೆಯಲ್ಲೇ ಸಿಡಿಲು ಬಡಿದು ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಅಫಜಲಪುರ್ ತಾಲೂಕಿನ ಕರಜಗಿ ಗ್ರಾಮದಲ್ಲಿ ನಡೆದಿದೆ.
ನಬಿಲಾಲ್ ಚೌಧರಿ(70) ಮೃತ ರೈತ ಎಂದು ಗುರುತಿಸಲಾಗಿದೆ.
ರೈತ ನಬಿಲಾಲ್, ಜಮೀನಿನಲ್ಲಿ ಕೆಲಸ ಮಾಡುವಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಅಫಜಲಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.