ಕಲಬುರಗಿ| ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ: ಮದ್ಯಮಾರಾಟ, ಸಂತೆ, ಜಾತ್ರೆ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ

Date:

Share post:

ಕಲಬುರಗಿ: ಕಾಳಗಿ ತಾಲೂಕಿನ ಕಾಳಗಿ ಪಟ್ಟಣ ಪಂಚಾಯತಿಯ ಒಟ್ಟು 11 ವಾರ್ಡ್‍ಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಸಾರ್ವತ್ರಿಕ ಚುನಾವಣೆ-2025 ಹಿನ್ನೆಲೆಯಲ್ಲಿ ಇದೇ ಆಗಸ್ಟ್ 17 ರಂದು ಮತದಾನ ನಡೆಯಲಿದೆ. ಈ ಚುನಾವಣೆಯು ಮುಕ್ತ, ಶಾಂತಿಯುತ ಹಾಗೂ ನ್ಯಾಯಸಮ್ಮತವಾಗಿ ನಡೆಸಲು ಅನುಕೂಲವಾಗುವಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ವಾರ್ಡ್ ವ್ಯಾಪ್ತಿಯಲ್ಲಿ ಮದ್ಯಮಾರಾಟ, ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಿ ಕಲಬುರಗಿ ಜಿಲ್ಲಾ ದಂಡಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ಬಿ. ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

 

ಮತದಾನ ನಡೆಯುವ ಮತಗಟ್ಟೆಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಆಗಸ್ಟ್ 15ರ ಸಂಜೆ 6 ಗಂಟೆಯಿಂದ ಆಗಸ್ಟ್ 18ರ ಬೆಳಿಗ್ಗೆ 6 ಗಂಟೆಯವರೆಗೆ 2023 ಬಿ.ಎನ್.ಎಸ್.ಎಸ್ ಸೆಕ್ಷನ್ 163 ರನ್ವಯ ಮತದಾರರು ಹಾಗೂ ಚುನಾವಣೆಗೆ ಸಂಬಂಧಪಟ್ಟ ಹೊರತುಪಡಿಸಿ ಇತರರ ಪ್ರವೇಶವನ್ನು ನಿಷೇಧಿಸಲಾಗಿದೆ.

 

ಕರ್ನಾಟಕ ಅಬಕಾರಿ ಸನ್ನದುಗಳ (ಸಾಮಾನ್ಯ ಷರತ್ತುಗಳು) ನಿಯಮಾವಳಿಗಳು 1967 ನಿಯಮ 10(ಬಿ) ರಂತೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ವಾರ್ಡ್ ವ್ಯಾಪ್ತಿಯಲ್ಲಿ 2025ರ ಆಗಸ್ಟ್ 16ರ ಸಂಜೆ 6 ಗಂಟೆಯಿಂದ ಆಗಸ್ಟ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ಮದ್ಯದ ಅಂಗಡಿಗಳನ್ನು ಹಾಗೂ ಎಲ್ಲಾ ತರಹದ ಮದ್ಯಪಾನ, ಸರಾಯಿ, ಸ್ವದೇಶಿ ಹಾಗೂ ವಿದೇಶಿ ಮದ್ಯಪಾನ, ಮಾದಕ ವಸ್ತುಗಳ ಮಾರಾಟ ಮಾಡುವುದನ್ನು ನಿಷೇಧಿಸಲಾಗಿದೆ. ಅದೇ ರೀತಿ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯುವ ವಾರ್ಡ್ ವ್ಯಾಪ್ತಿಯಲ್ಲಿ ಆಗಸ್ಟ್ 17 ರಂದು ಬೆಳಿಗ್ಗೆ 6 ಗಂಟೆಯಿಂದ ಆಗಸ್ಟ್ 18 ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲಾ ತರಹದ ಸಂತೆ ಹಾಗೂ ಜಾತ್ರೆಗಳನ್ನು ನಿಷೇಧಿಸಲಾಗಿದೆ.

 

ಭಾರತಿಯ ಆಯುಧ ಕಾಯ್ದೆ 1959 (Arms Act) ನಿಯಮಾವಳಿಗಳು 2016 ನಿಯಮ 24(ಎ) ರಡಿ ಪದತ್ತವಾದ ಅಧಿಕಾರದನ್ವಯ ಚುನಾವಣಾ ಜರುಗಲಿರುವ ಪಟ್ಟಣ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮಾತ್ರ ಸಾರ್ವಜನಿಕರು ಹೊಂದಿರುವ ಆಯುಧಗಳನ್ನು (ಗನ್/ರಿವಾಲ್ವರ್ ಇತ್ಯಾದಿ) ಚುನಾವಣಾ ಮುಕ್ತಾಯವಾಗುವವರೆಗೆ ಸಂಬಂಧಪಟ್ಟ ಪೊಲೀಸ್ ಠಾಣೆಗೆ ಜಮೆ ಮಾಡುವಂತೆ ಅವರು ಆದೇಶಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....

ಕಲಬುರಗಿ| ಕಾಂಗ್ರೆಸ್ ಪಕ್ಷಕ್ಕೆ ಭರ್ಜರಿ ಜಯ; ಕೈ ತೆಕ್ಕೆಗೆ ಕಾಳಗಿ ಪಟ್ಟಣ ಪಂಚಾಯತ್ 

ಕಲಬುರಗಿ: ಕಾಳಗಿ ಪಟ್ಟಣ ಪಂಚಾಯತ್ ನ ಮೊದಲ ಸಾರ್ವತ್ರಿಕ ಚುನಾವಣೆಯಲ್ಲಿ 11...