ಕಲಬುರಗಿ| 11 ತಿಂಗಳಿಂದ ತಲೆಮರಿಸಿಕೊಂಡಿದ್ದ ಕಳ್ಳತನ ಆರೋಪಿ ಬಂಧನ: ಎಸ್ಪಿ ಅಡ್ಡೂರು ಶ್ರೀನಿವಾಸಲು

Date:

Share post:

ಕಲಬುರಗಿ: ಚಿತ್ತಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸರಣಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ 11 ತಿಂಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ತಿಳಿಸಿದ್ದಾರೆ.

ನಿಜಾಮ ಗೇಟ್ ವಾಡಿ ನಿವಾಸಿ ಶೇಖ್ ಪಾಶ ತಂದೆ ಬಾಬಾ ಮೈನುದ್ದೀನ್ ಬಂಧಿತ ಆರೋಪಿಯಾಗಿದ್ದು, ಈತನಿಂದ 4,40,400 ರೂಪಾಯಿ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಗುರುವಾರ ಜಿಲ್ಲಾ ಪೊಲೀಸ್ ಭವನದಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಎಸ್ಪಿ ಅವರು ಮಾಹಿತಿ ನೀಡಿದರು.

ಈ ಹಿಂದೆ ಇದೇ ಪಕರಣದಲ್ಲಿ ನಾಲವಾರ ನಿವಾಸಿಗಳಾದ ಸಿದ್ದೀಕ್ ತಂದೆ ಅಹಮದ್ ಮತ್ತು ಉಬೇದ್ ಮಹಮ್ಮದ್ ಚಾವುಸ್ ಅವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಇದೇ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ಆಗಿರುವ ಶೇಖ್ ಪಾಶ ಎಂಬಾತನು ಕಳೆದ 11 ತಿಂಗಳಿಂದ ಮಹಾರಾಷ್ಟ್ರದ ಪುನಾ, ಬಾಂಬೆ ಸೇರಿದಂತೆ ಮತ್ತಿತರ ನಗರಗಳಲ್ಲಿ ತನ್ನ ವಾಸ ಸ್ಥಳವನ್ನು ಬದಲಾಯಿಸುತ್ತಾ ತಲೆಮಾರಿಸಿಕೊಂಡಿದ್ದ. ಈತನನ್ನು ಬಂಧಿಸಲು ತನಿಖಾ ತಂಡಗಳನ್ನು ರಚಿಸಲಾಗಿತ್ತು, ಕೊನೆಗೆ ಆರೋಪಿಯನ್ನು ವಶಕ್ಕೆ ಪಡೆದು ಕಳ್ಳತನವಾಗಿದ್ದ 4,40,400 ರೂಪಾಯಿ ಮೌಲ್ಯದ ಬೆಳ್ಳಿ ಬಂಗಾರದ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಿ ಮಾಡುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಮಹೇಶ್ ಮೇಘಣ್ಣನವರ್, ಡಿವೈಎಸ್ಪಿ ಶಂಕರಗೌಡ ಪಾಟೀಲ್, ಸಿ ಪಿ ಚಂದ್ರಶೇಖರ್ ತಿಗಡಿ, ಪಿಎಸ್ಐಗಳಾದ ಶ್ರೀಶೈಲ್ ಅಂಬಾಟಿ ಚಂದ್ರಮಪ್ಪ ಸೇರಿದಂತೆ ಮತ್ತಿತರರು ಇದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...