ಆಳಂದ ಶಾಸಕ ಬಿ.ಆರ್ ಪಾಟೀಲ್ ಆಪ್ತರಾಗಿರುವ ಕಾಂಗ್ರೆಸ್ ಮುಖಂಡ ಬಸವರಾಜ್ ಚೌಲ್ ಅವರ ಪುತ್ರನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಹೊರವಲಯದ ನಡೆದಿದೆ.
ಅಲ್ಲಿನ ಜಿಡಗಾ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಮುಖಂಡನ ಮಗ ಚಂದ್ರಶೇಖರ್ ಚೌಲ್ (21) ಹತ್ಯೆಗೀಡಾಗಿದ್ದಾನೆ. ಚಂದ್ರಶೇಖರ್ ಚೌಲ್ ತನ್ನ ಸ್ನೇಹಿತರಿಂದಲೇ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಈ ಸಾವಿಗೆ ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ.
ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಆಳಂದ ಪಟ್ಟಣದ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಹತ್ಯೆಗೈದ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.
#kalaburagi #congress #brpatil #aland #crime #gulbarga