ಕಲಬುರಗಿ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ವತಿಯಿಂದ ಚಿಂಚೋಳಿ ತಾಲ್ಲೂಕಿನ ಶಾದಿಪುರ ಗ್ರಾಮ್ ಪಂಚಾಯತ್ ನಲ್ಲಿ ವಿಶೇಷ ಸತ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ತಾಲ್ಲೂಕು ಅಧ್ಯಕ್ಷರಾದ ಲಿಂಬಾಜಿ ಚೌಹಾಣ್ ಅವರು ಶಾದಿಪುರ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀಧರ್ ಅವರಿಗೆ ಸನ್ಮಾನ ಮಾಡುವ ಮೂಲಕ ಅವರನ್ನು ಸ್ವಾಗತಿಸಿದರು.
ಗ್ರಾಮದ ಅಭಿವೃದ್ಧಿಗೆ ಶ್ರೀಧರ್ ಅವರ ಕೊಡುಗೆಯನ್ನು ಸ್ಮರಿಸಿ, ವೇದಿಕೆಯಿಂದ ಕೃತಜ್ಞತೆ ಸಲ್ಲಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆಯ ಈರಪ್ಪ, ದೇವೇಂದ್ರ, ವಿಜಯಕುಮಾರ್ ಧೋರಿ, ಬಸಣ್ಣ ಧೋರಿ, ರಮೇಶ್ ಬಿಲಾಲ್ಪುರ, ಸ್ಯಾಮ್ಸಂಗ್ ಕಾವಲಿ, ಶಾಂತಪ್ಪ, ಚಂದ್ರಶೇಖರ್, ಜೀವನ ವಾಳಿಕರ್ ಸೇರಿದಂತೆ ವಿವಿಧ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.