ಬೋರ್ಡ್ ಎಕ್ಸಾಮ್ ರಿಸಲ್ಟ್ ಯಾವಾಗ ಗೊತ್ತಾ?

Date:

Share post:

2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ಮೌಲ್ಯಾಂಕನದ ಫಲಿತಾಂಶವನ್ನು ನಾಳೆ (ಏ. 8ರಂದು) ಬೆಳಗ್ಗೆ ಶಾಲೆಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.

ಈ ಕುರಿತಾಗಿ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಈ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ & ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಾಂಕನ-2 (SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲಾಗಿದೆ ಎಂದಿದೆ.

CBSE Class 10th Result declared; here's how to check marks online

ಆಯುಕ್ತ ಹೊರಡಿಸಿದ ಸುತ್ತೋಲೆಯಂತೆ ಏ.8ರಂದು ಸಮುದಾಯದತ್ತ ಶಾಲಾ ದಿನದಂದು 1 ರಿಂದ 9 ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲು ಸೂಚಿಸಿರುತ್ತಾರೆ. ಅದೇ ರೀತಿ 5, 8 & 9ನೇ ತರಗತಿಗಳ ಮೌಲ್ಯಾಂಕನದ ಫಲಿತಾಂಶವನ್ನು ಏ.8 ರಂದು ಬೆಳಗ್ಗೆ 9 ಗಂಟೆಯೊಳಗೆ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪ್ರಕಟಿಸಬೇಕು ಎಂದು ಸೂಚಿಸಲಾಗಿದೆ. ಯಾವುದೇ ಕಾರಣಕ್ಕೆ ವಿಳಂಬ ಮಾಡದಂತೆ ಫಲಿತಾಂಶ ಪ್ರಕಟಿಸಬೇಕು ಎಂದು ಶಾಲೆಗಳ ಮುಖ್ಯಶಿಕ್ಷಕರು, ಪ್ರಾಂಶುಪಾಲರಿಗೆ ಸೂಚಿಸಿದ್ದಾರೆಂದು ತಿಳಿಸಿದೆ.

Share post:

spot_imgspot_img

Popular

More like this
Related

ಕಲಬುರಗಿ| ಮೂವರ ಬೈಕ್ ಕಳ್ಳರ ಬಂಧನ; 29 ಬೈಕ್ ಜಪ್ತಿ: ಎಸ್ಪಿ ಅಡ್ಡೂರು ಶ್ರೀನಿವಾಸಲು

ಕಲಬುರಗಿ: ಬೈಕ್ ಕಳ್ಳತನ ಮಾಡುತ್ತಿದ್ದ ಮೂವರು ಬೈಕ್ ಕಳ್ಳರನ್ನು ಬಂಧಿಸುವಲ್ಲಿ ಚಿಂಚೋಳಿ...

ಕಲಬುರಗಿ| ನಾಲ್ವರು ಅಂತರ್ ರಾಜ್ಯ ದರೋಡೆ ಕೋರರ ಬಂಧನ; 8.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ನಗದು ವಶ

ಕಲಬುರಗಿ: ಕಳೆದ ಜೂನ್ 22 ರಂದು ಶಹಾಬಾದ ನಗರದ ಮನೆಯೊಂದರಲ್ಲಿ ನಡೆದ...

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...