ಕಲಬುರಗಿ: ಎಂ.ಎಸ್.ಕೆ.ಮಿಲ್ ಜಿಡಿಎ ವಸತಿ ಗೃಹ ಬಡಾವಣೆಗಳ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದಿಂದ ಇದೇ ಮೇ 3 ರಂದು ಸಂಜೆ 5 ಗಂಟೆಗೆ ನಗರದ ಜಿ.ಡಿ.ಎ.ಬಡಾವಣೆ ಹತ್ತಿರ ಬುದ್ದ, ಬಸವ, ಡಾ.ಬಿ.ಆರ್.ಅಂಬೇಡ್ಕರವರ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಅಧ್ಯಕ್ಷ ಮಲ್ಲಿಕಾರ್ಜುನ ಜಿ.ಮದಾನಿ ಹೇಳಿದರು.
ನಗರದ ಪತ್ರಿಕಾಭವನದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಮ್.ಎಸ್.ಕೆ.ಮಿಲ್ ಬಡಾವಣೆಯ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷರಾದ ಶಿವಶರಣಪ್ಪ ನಂದಗಿರಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಕಾರ್ಯಕ್ರಮ ಆಚರಣೆ ಮಾಡಲಾಗುತ್ತಿದೆ ಎಂದು ಹೇಳಿದರು.
ತೋಂಟದಾರ್ಯ ಮಠದ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮಿ, ಬೆಂಗಳೂರು ಲುಂಬನಿ ಬುದ್ಧವಿಹಾರದ ಭಂತೆ ನಾಗರತ್ನ ದಿವ್ಯ ಸಾನಿಧ್ಯ ವಹಿಸುವರು. ಲೋಕಸಭಾ ಸದಸ್ಯ ರಾಧಾಕೃಷ್ಣ ದೊಡ್ಡಮನಿ ಉದ್ಘಾಟಿಸುವರು, ಮುಖ್ಯ ಅತಿಥಿಯಾಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಹಾಗೂ ಅತಿಥಿಯಾಗಿ ಕಲಬುರಗಿ ಮಹಾನಗರ ಪಾಲಿಕೆ ಸದಸ್ಯ ವರ್ಷಾ ಆರ್.ಜಾನೆ ಆಗಮಿಸುವರು ಎಂದರು.
ಜಯಂತ್ಯೋತ್ಸವ ಸಮಿತಿಯ ಅಧ್ಯಕ್ಷ ಶಿವಶರಣಪ್ಪ ನಂದಗಿರಿ ಮಾತನಾಡಿ, ಈ ಒಂದು ಕಾರ್ಯಕ್ರಮದಲ್ಲಿ ನಿಜಗುಣ ಪ್ರಭು ತೋಂಟದಾರ್ಯ ಮಹಾಸ್ವಾಮೀಜಿ ಬುದ್ಧ, ಬಸವ, ಡಾ.ಬಿ.ಆರ್.ಅಂಬೇಡ್ಕರ್ ವಿಚಾರಗಳನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಮಾಡುತ್ತಾರೆ ಎಂದರು.ಬುದ್ಧ
ಸುದ್ದಿಗೋಷ್ಠಿಯಲ್ಲಿ ಜಗನ್ನಾಥ ಎನ್.ತೇಲ್ಕರ್, ಪ್ರವೀಣನಾಗ ಧೊಳೆ, ಅಶೋಕ ತಳಕೇರಿ, ಸತೀಶ್ ಕುಮಾರ ಸಜ್ಜನ್ ಸೇರಿದಂತೆ ಇತರರು ಇದ್ದರು.