ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ವಿವಿಧ 30 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅದರಲ್ಲಿ ಜವಾನ-24 (ಕಲ್ಯಾಣ ಕರ್ನಾಟಕ-21), ಟೈಪಿಸ್ಟ್-5 (ಕಲ್ಯಾಣ ಕರ್ನಾಟಕ-3), ಸ್ಟೆನೋಗ್ರಾಫರ್-1 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ.
ಜವಾನ ಹುದ್ದೆಗಳಿಗೆ 10ನೇ ತರಗತಿ ಪಾಸಾದವರು ಅರ್ಜಿ ಸಲ್ಲಿಸಬಹುದು. ಸ್ಟೆನೋಗ್ರಾಫರ್ ಹುದ್ದೆಗೆ ಪಿಯುಸಿ ಮುಗಿದಿರಬೇಕು. ಅರ್ಹ ಅಭ್ಯರ್ಥಿಗಳು ವೆಬ್ ಸೈಟ್ yadgir.dcourts.gov.in ಮೂಲಕ ಆನ್ ಲೈನ್ ನಲ್ಲಿ ಫೆ.15ರ ಒಳಗೆ ಅರ್ಜಿ ಹಾಕಬಹುದು ಎಂದು ಪ್ರಕಟಣೆ ಹೊರಡಿಸಲಾಗಿದೆ.