ರಾಜ್ಯದ ಮಾಜಿ ಸಿಎಂ ಎಸ್ಎಂ ಕೃಷ್ಣ ನಿಧನ 

Date:

Share post:

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು, ಮಾಜಿ ರಾಜ್ಯಪಾಲರು, ಕೇಂದ್ರದ ಮಾಜಿ ಸಚಿವರಾದ ಎಸ್. ಎಂ. ಕೃಷ್ಣ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಇಂದು ಬೆಳಗಿನ ಜಾವ 2.30ರ ವೇಳೆಗೆ ನಿಧನರಾದರು.

ಎಸ್ ಎಂ ಕೃಷ್ಣ ಅವರು ಕಳೆದ 6 ತಿಂಗಳಿನಿಂದ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು. ಇತ್ತೀಚೆಗೆ ಶ್ವಾಸಕೋಶದ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರಿಗೆ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಮೂಲತಃ ಮಂಡ್ಯ ಜಿಲ್ಲೆಯ ಮದ್ದೂರು ತಾಲ್ಲೂಕಿನ ಸೋಮನಹಳ್ಳಿ ಗ್ರಾಮದವರು. ಎಸ್.ಸಿ.ಮಲ್ಲಯ್ಯ ಮತ್ತು ತಾಯಮ್ಮ ದಂಪತಿಯ ಪುತ್ರನಾಗಿ ಮೇ 1, 1932ರಲ್ಲಿ ಜನಿಸಿದ್ದರು.

ವಿಧಾನಸಭೆ ಸ್ಪೀಕರ್, ಉಪಮುಖ್ಯಮಂತ್ರಿ, ವಿದೇಶಾಂಗ ವ್ಯವಹಾರಗಳ ಸಚಿವ ಹಾಗೂ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕೆ ಸದಾಸಶಿವನಗರದ ನಿವಾಸದಲ್ಲಿ ಮಂಗಳವಾರ ಇಡೀ ದಿನ ಇಡಲಾಗುವುದು. ಬಳಿಕ ನಾಳೆ ಬುಧವಾರ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಎಸ್ಎಂ ಕೃಷ್ಣ ಅವರು 2023ನೇ ಸಾಲಿನ ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....