‘ರಾವುತ’ ಚಿತ್ರದ ಪೋಸ್ಟರ್ ಬಿಡುಗಡೆ

Date:

Share post:

ಶ್ರೀ ವಿಶ್ವಕರ್ಮ ಸಿನಿಮಾಸ್ ಅಡಿಯಲ್ಲಿ , ಸಿದ್ದು ವಜ್ರಪ್ಪ ನಿರ್ದೇಶನದ ‘ರಾವುತ’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಖ್ಯಾತ ನಿರ್ದೇಶಕ ಸಂತೋಷ ಆನಂದರಾಮ್ & ಯುವ ರಾಜಕುಮಾರ ಅವರು ಬಿಡುಗಡೆ ಮಾಡಿದರು.

ಖಡ್ಗ ಹಿಡಿದು ನಿಂತಿರುವ ನಾಯಕನ ಪ್ರಭಾವಳಿಯಲ್ಲಿ ಕಾಲಚಕ್ರದಂತಿರುವ ಪೋಸ್ಟರ್ ವಿನ್ಯಾಸ ತನ್ನ ವಿಭಿನ್ನತೆಯಿಂದ ಜನರ ಗಮನ ಸೆಳೆಯುತ್ತಿದೆ.

ಈ ಚಿತ್ರದ ಮೋಷನ್ ಪೋಸ್ಟರ್ ಅನ್ನು ಮಾರ್ಚ್ 3ರಂದು ಕನಕಗಿರಿಯ ಉತ್ಸವದಲ್ಲಿ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಸಿದ್ದು ವಜ್ರಪ್ಪ ತಿಳಿಸಿದ್ದಾರೆ.

ಈ ಚಿತ್ರದ ಬಹುತೇಕ ಚಿತ್ರೀಕರಣ ಉತ್ತರ ಕರ್ನಾಟಕದಲ್ಲಿ ನಡೆದಿದೆ. ಸೆನ್ಸಾರ್ ಮಂಡಳಿಯಿಂದ ಯುಎ ಪ್ರಮ ‘ರಾವುತ’ ಚಿತ್ರದ ಪೋಸ್ಟರ್ ಹಂಚಿಕೊಂಡಿದ್ದಾರೆ.

ಈರಣ್ಣ ಸುಭಾಷ್ ಬಡಿಗೇರ್ ನಿರ್ಮಾಣದ ಈ ಚಿತ್ರದಲ್ಲಿ ರಾಜ್ ಪ್ರವೀಣ ನಾಯಕ ನಟನಾಗಿ ನಟಿಸಿದ್ದಾರೆ. ಅವರಿಗೆ ಜೊತೆಯಾಗಿ ಭವಾನಿ ಪುರೋಹಿತ್ ನಾಯಕಿಯ ಪಾತ್ರ ನಿಭಾಯಿಸಿದ್ದಾರೆ.
ಚಿತ್ರಕ್ಕೆ ಸುಚೀನ್ ಶರ್ಮ ಅವರ ಸಂಗೀತವಿದೆ , ಲಕ್ಷ್ಮೀಕಾಂತ ಜೋಶಿಯವರ ಕಲಾ ನಿರ್ದೇಶನದಲ್ಲಿ ಪರದೆ ರಂಗೇರಿದೆ. ಚಿತ್ರ ಅತೀ ಶೀಘ್ರದಲ್ಲೇ ತೆರೆಕಾಣಲಿದೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...