ಕಲಬುರಗಿ| ಕಾರು-ಲಾರಿ ಮಧ್ಯೆ ಭೀಕರ ಅಪಘಾತ; ಇಬ್ಬರು ಸಾವು!

Date:

Share post:

ಕಲಬುರಗಿ: ಕಾರು ಮತ್ತು ಲಾರಿಯ ಮಧ್ಯೆ ಪರಸ್ಪರ ಢಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಇಬ್ಬರು ಮೃತಪಟ್ಟಿರುವ ಘಟನೆ ಹುಮನಾಬಾದ್ ಮುಖ್ಯ ರಸ್ತೆಯ ಸ್ವಾಮಿ ಸಮರ್ಥ ದೇವಸ್ಥಾನದ ಸಮೀಪ ಗುರುವಾರ ಸಂಜೆ ನಡೆದಿದೆ.

ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಗಂಡ ಹೆಂಡತಿ ಇಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ, ಕಲಬರಗಿ ನಗರದ ರೆಹಮತ್ ನಗರದ ನಿವಾಸಿ, ಕಾರು ಚಾಲಕ ಮಹಮದ್ ಶೇಕಿಬ್ ಜಿಲ್ಹಾನಿ (32) ಮತ್ತು ಆತನ ಪತ್ನಿ ಶೇರಿನ್‌ ಶೆಕಿಬ್ (28) ಸ್ಥಳದಲ್ಲೇ ಮೃತಪಟ್ಟಿರುವ ದಂಪತಿಯಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ.

ಹುಮನಾಬಾದ್ ಕಡೆಯಿಂದ ಕಲಬುರಗಿ ಕಡೆಗೆ ಬರುತ್ತಿದ್ದ ಕಾರು, ಕಲಬುರಗಿಯಿಂದ ಹುಮನಾಬಾದ್ ಕಡೆಗೆ ತೆರಳುತ್ತಿದ್ದ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದೆ. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತಾಗಿ ಸಂಚಾರಿ ಪೊಲೀಸ್ ಠಾಣೆ 2-ರಲ್ಲಿ ಪ್ರಕರಣ ದಾಖಲಾಗಿದೆ.

Share post:

spot_imgspot_img

Popular

More like this
Related

ಕಲಬುರಗಿ| ಆದಿವಾಸಿ ತಾಂಡಾಗಳಲ್ಲಿ ಮೂಲಸೌಕರ್ಯ ಕೊರತೆ: ಲತಾ ಮೋಹನ್ ಪರಿಶೀಲನೆ

ಕಲಬುರಗಿ: ಜಿಲ್ಲೆಯ ವಿವಿಧ ಆದಿವಾಸಿ ತಾಂಡಾಗಳಿಗೆ ಭೇಟಿ ನೀಡಿದ ಕರ್ನಾಟಕ ರಾಜ್ಯ...

ಕಲಬುರಗಿಯಲ್ಲಿ ಜೋಯಾಲುಕ್ಕಾಸ್‌ನ ‘ಬ್ರಿಲಿಯನ್ಸ್ ಡೈಮಂಡ್ ಜ್ಯುವೆಲ್ಲರಿ ಶೋ’

ಕಲಬುರಗಿ: ಜಗತ್ತಿನ ಪ್ರಸಿದ್ಧ ಜ್ಯುವೆಲ್ಲರಿ ಬ್ರ್ಯಾಂಡ್ ಜೋಯಾಲುಕ್ಕಾಸ್, ಕಲಬುರಗಿ ನಗರದ ತನ್ನ...

ಕಲಬುರಗಿ| ಬಿ.ನಾಗೇಂದ್ರ ಅವರನ್ನು ಸಂಪುಟದಿಂದ ಕೈಬಿಡಿ: ರಾಜಕುಮಾರ್ ಪಾಟೀಲ್ ತೆಲ್ಕೂರ್

ಕಲಬುರಗಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ರೂಪಾಯಿ ಹಗರಣಕ್ಕೆ...

Kalaburagi| ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಬಿ.ಆರ್ ಪಾಟೀಲ್ ರಾಜೀನಾಮೆ 

ಕಲಬುರಗಿ: ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ...