ಕಲಬುರಗಿ| ಟ್ರಾಫಿಕ್ ಪೊಲೀಸರಿಗೆ ಹವಾ ನಿಯಂತ್ರಿತ ಹೆಲ್ಮೆಟ್ ವಿತರಣೆ

Date:

Share post:

ಕಲಬುರಗಿ: ಬಿಸಿಲಿನಲ್ಲಿ ಕಾರ್ಯನಿರ್ವಹಿಸುವ ಪೊಲೀಸ್ ಸಿಬ್ಬಂದಿಯವರ ಹಿತ ರಕ್ಷಣೆ ದೃಷ್ಟಿಯಿಂದ ರಾಜ್ಯದಲ್ಲಿ ಪ್ರಥಮ ಬಾರಿಗೆ ಕಲಬುರಗಿ ನಗರ ಪೊಲೀಸ್ ವತಿಯಿಂದ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯವರಿಗೆ ಹವಾ ನಿಯಂತ್ರಿತ(ಎ.ಸಿ)ಹೆಲ್ಮೆಟ್ ವಿತರಿಸಲಾಗುತ್ತಿದೆ ಎಂದು ಪೊಲೀಸ್ ಕಮಿಷನರ್ ಡಾ. ಶರಣಪ್ಪ ಎಸ್.ಡಿ ಹೇಳಿದರು.

ನಗರದ ಪೊಲೀಸ್ ಆಯುಕ್ತಾಲಯದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮೊದಲ ಹಂತವಾಗಿ 10 ಹವಾ ನಿಯಂತ್ರಿತ ಹೆಲ್ಮೆಟ್, 10 ಪೊಲ್ಲ್ಯೂಷನ್ ಕಂಟ್ರೋಲ್ ಮಾಸ್ಕ್, 140 ಮಿಂಚುವ ಜಾಕೆಟ್, ರಾತ್ರಿ ಸಮಯದಲ್ಲಿ ಕರ್ತವ್ಯ ನಿರ್ವಹಿಸಲು 150 ಬ್ಯಾಟನ್ ಗಳನ್ನು ವಿತರಿಸಲಾಗಿದೆ ಎಂದರು.

ಕಲಬುರಗಿಯಲ್ಲಿ ತಾಪಮಾನ, ವಾಯು ಮಾಲಿನ್ಯ ಹೆಚ್ಚಾಗುತ್ತಿರುವ ಹಿನ್ನೆಲೆ ಟ್ರಾಫಿಕ್ ಸಿಬ್ಬಂದಿಯವರ ಆರೋಗ್ಯದ ಹಿತದೃಷ್ಟಿಯಿಂದ ಅವರಿಗೆ ಮೊದಲಾದ್ಯತೆಯಾಗಿ ಬಿಸಿಲಿನ ನಿಯಂತ್ರಣ ಪರಿಕರಗಳನ್ನು ಕೊಡಲಾಗುತ್ತಿದೆ. ಒಂದು ವೇಳೆ ಸಿಬ್ಬಂದಿಗಳಿಂದ ಈ ಪ್ರಯತ್ನಕ್ಕೆ ಉತ್ತಮ ಪ್ರತಿಕ್ರಿಯೆ ಬಂದರೆ ಮುಂದಿನ ದಿನಗಳಲ್ಲಿ ಎಲ್ಲರಿಗೂ ವಿಸ್ತರಿಸಲಾಗುತ್ತದೆ ಎಂದ ಅವರು, ಈಗಾಗಲೇ ಟ್ರಾಫಿಕ್ ಪೊಲೀಸರಿಗೆ ಬಿಸಿಲಿನ ವೇಳೆಯಲ್ಲಿ ನೀರು, ಮಜ್ಜಿಗೆ ಕೊಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಎ.ಸಿ ಹೆಲ್ಮೆಟ್ ಚಾರ್ಜರ್ ಗೆ ಒಂದು ಬಾರಿ ಚಾರ್ಜ್ ಮಾಡಿದರೆ, ಗರಿಷ್ಠ 8 ಗಂಟೆಗಳ ಬ್ಯಾಟರಿಯ ಸಾಮರ್ಥ್ಯ ಹೊಂದಿದೆ, ಇದು ಬೆಳಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಕಾರ್ಯ ನಿರ್ವಹಿಸುತ್ತದೆ ಎಂದರು.

ಇದೇ ವೇಳೆಯಲ್ಲಿ ಪೊಲೀಸ್ ಕಮಿಷನರ್ ಅವರು, ಸಂಚಾರ ಪೊಲೀಸ್ ಠಾಣೆ – 1 ಮತ್ತು ಸಂಚಾರ ಪೊಲೀಸ್ ಠಾಣೆ – 2ರ ಪೊಲೀಸ್ ಅಧಿಕಾರಿಗಳಿಗೆ ಸಾಂಕೇತಿಕವಾಗಿ ಎ.ಸಿ ಹೆಲ್ಮೆಟ್ ಸೇರಿದಂತೆ ಇತರೆ ಕಿಟ್ ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಡಿಸಿಪಿಗಳಾದ ಕನಿಕಾ ಸಿಕ್ರಿವಾಲ್, ಪ್ರವೀಣ್ ನಾಯಕ್, ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ ಹಾಗೂ ಸಿಬ್ಬಂದಿಯವರು ಹಾಜರಿದ್ದರು.

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....