ಕಲಬುರಗಿ| ಪಾಕ್ ವಿರುದ್ಧ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಬೆಂಬಲ: ಜಮೀರ್ ಅಹ್ಮದ್ ಖಾನ್

Date:

Share post:

ಕಲಬುರಗಿ: ಪಾಕಿಸ್ತಾನದ ವಿರುದ್ದ ಕೇಂದ್ರ ಸರಕಾರ ಏನೇ ನಿರ್ಧಾರ ತೆಗೆದುಕೊಂಡರು, ನಮ್ಮ ಬೆಂಬಲ ಕೇಂದ್ರಕ್ಕಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದರು.

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ನಮ್ಮ ಪಕ್ಷದಿಂದ ಬೆಂಬಲವಿದೆ ಎಂದು ಈಗಾಗಲೇ, ನಮ್ಮ ನಾಯಕರಾದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಹೀಗಾಗಿ, ಪಾಕಿಸ್ತಾನ ವಿರುದ್ಧ ಕೈಗೊಳ್ಳವ ನಿರ್ಧಾರಕ್ಕೆ ನಾವು ಬದ್ದ ಎಂದು ಸ್ಪಷ್ಟಪಡಿಸಿದರು.

ಇನ್ನೂ, ಜಮೀರ್ ಯುದ್ದಕ್ಕೆ ಹೋಗೊದು ಬೇಡ, ಇಲ್ಲಿರೋ ಕುನ್ನಿಗಳನ್ನ ಕೊಲ್ಲಲಿ ಎನ್ನೋವ ಸಿಟಿ ರವಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಈಗಲೂ ನನ್ನ ಹೇಳಿಕೆಗೆ ಬದ್ದನಿದ್ದೇನೆ. ಸುಸೈಡ್ ಬಾಂಬ್ ಕಟ್ಟಿಕೊಂಡು ಹೋಗುತ್ತೇನೆ. ಸಿ.ಟಿ.ರವಿಗೆ ಕೆಲಸವೇನು ಇಲ್ಲ. ಅದಕ್ಕಾಗಿ ಹಿಂಗೆಲ್ಲ ಮಾತನಾಡುತ್ತಾರೆ. ನಮಗೆ ನಮ್ಮ ದೇಶ ಮುಖ್ಯ. ಅದಕ್ಕಾಗಿ ನಾನು ಯುದ್ದಕ್ಕೆ ಹೋಗುತ್ತೇನೆ ಎಂದಿದ್ದೇನೆ ಎಂದು ಟಾಂಗ್ ನೀಡಿದರು.

Share post:

spot_imgspot_img

Popular

More like this
Related

ಕಲಬುರಗಿ| ವಿಕಲಚೇತನ ಫಲಾನುಭವಿಗಳಿಗೆ ವಿವಿಧ ಬಗೆಯ ಸುಮಾರು 62 ಲಕ್ಷ ರೂ. ಮೊತ್ತದ ಸಾಧನ ಸಲಕರಣೆಗಳ ವಿತರಣೆ

ಕಲಬುರಗಿ: ಹೌಸಿಂಗ್ ಆಂಡ್ ಅರ್ಬನ್ ಡೆವಲಪ್‍ಮೆಂಟ್ ಕಾರ್ಪೋರೇಶನ್ ಲಿಮಿಟೆಡ್ (HUDCO) ಸಂಸ್ಥೆಯ...

ಕಲಬುರಗಿ| ಲಾರಿ – ಬೈಕ್ ಢಿಕ್ಕಿ; ಬೈಕ್ ಸವಾರ ಮೃತ್ಯು; ಇನ್ನೋರ್ವ ಗಂಭೀರ ಗಾಯ

ಕಲಬುರಗಿ: ಲಾರಿ ಹಾಗೂ ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್...

ಕಲಬುರಗಿ| ರಾಮನವಮಿ ಆಚರಣೆ; ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಆದೇಶ

ಕಲಬುರಗಿ: ರಾಮ ನವಮಿ ಆಚರಣೆ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾದಂಡಾಧಿಕಾರಿಗಳಾದ...

ಕಲಬುರಗಿ| ಬೇಸಿಗೆಯ ಸವಾಲುಗಳ ಎದುರಿಸಲು ಸಿದ್ಧ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್

ಕಲಬುರಗಿ: ಕಲಬುರಗಿ ಜಿಲ್ಲಾಡಳಿತವು ಬೇಸಿಗೆಯ ಸವಾಲುಗಳನ್ನು ಎದುರಿಸಲು ಸಂಪೂರ್ಣ ಸನ್ನದ್ಧವಾಗಿದ್ದು, ಸಾರ್ವಜನಿಕರು...