ಟೆಸ್ಟ್ ಕ್ರಿಕೆಟ್ ಗೆ ರೋಹಿತ್ ಶರ್ಮಾ ನಿವೃತ್ತಿ ಘೋಷಣೆ; ಹೇಳಿದ್ದೇನು?

Date:

Share post:

ನವದೆಹಲಿ : ಟೆಸ್ಟ್ ನಾಯಕನ ಸ್ಥಾನದಿಂದ ಹಿಟ್ ಮ್ಯಾನ್ ರೋಹಿತ್ ಅವರನ್ನು ವಜಾಗೊಳಿಸಲಾಗಿದೆ ಎಂಬ ವರದಿಗಳ ಸಂದರ್ಭದಲ್ಲೇ ಭಾರತ ಏಕದಿನ ತಂಡದ ನಾಯಕ ಆಗಿರುವ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ ನಿಂದ ನಿವೃತ್ತಿ ಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.

ಕಳೆದ ವರ್ಷವಷ್ಟೇ ಭಾರತ ತಂಡ ಟಿ20 ವಿಶ್ವಕಪ್ ಗೆದ್ದ ನಂತರ ರೋಹಿತ್ ಶರ್ಮಾ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ್ದರು. ಇದೀಗ ಐಪಿಎಲ್ ಟೂರ್ನಿ ಮಧ್ಯದಲ್ಲೇ ದಿಢೀರ್ ನೇ ಟೆಸ್ಟ್ ಕ್ರಿಕೆಟ್ ಗೂ ನಿವೃತ್ತಿ ಪಡೆದಿದ್ದಾರೆ.

“ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್‌ನಿಂದ ನಿವೃತ್ತಿ ಹೊಂದುತ್ತಿದ್ದೇನೆ ಎಂದು ಹೇಳಿಕೊಳ್ಳಲು ಬಯಸುತ್ತೇನೆ. ನನ್ನ ದೇಶವನ್ನು ಪ್ರತಿನಿಧಿಸುವುದು ಸಂಪೂರ್ಣ ಗೌರವವಾಗಿದೆ. ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಕ್ರಿಕೆಟ್‌ನಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆʼ ಎಂದು ರೋಹಿತ್ ಶರ್ಮಾ ಪ್ರಕಟಿಸಿದ್ದಾರೆ.

 

Share post:

spot_imgspot_img

Popular

More like this
Related

ಕಲಬುರಗಿ| ಜನಜಾಗೃತಿಯಿಂದ ಸಾಂಕ್ರಾಮಿಕ ರೋಗಗಳ ನಿರ್ಮೂಲನೆ ಸಾಧ್ಯ: ಡಾ.ಶರಬಸಪ್ಪ ಕ್ಯಾತನಾಳ

ಕಲಬುರಗಿ: ಸೊಳ್ಳೆಗಳಿಂದ ಹರಡುವಂತಹ ರೋಗಗಳಾದ ಡೆಂಗ್ಯೂ, ಚಿಕೂನ ಗುನ್ಯಾ, ಆನೆಕಾಲು ರೋಗ,...

ಕಲಬುರಗಿ| ಪರಿಸರ ಸ್ನೇಹಿ ಮಣ್ಣಿನ ಗಣಪ ಪ್ರತಿಷ್ಠಾಪಿಸಿ: ಜಿಲ್ಲಾಧಿಕಾರಿ ಬಿ.ಫೌಜಿಯಾ

ಕಲಬುರಗಿ: ಸೂಫಿ-ಸಂತರ ನಾಡು ಕಲಬುರಗಿ ಶಾಂತಿ-ಸೌಹಾರ್ದತೆಗೆ ಹೆಸರುವಾಸಿಯಾಗಿದ್ದು, ಗಣೇಶ ಚತುರ್ಥಿ ಮತ್ತು...

ಕಲಬುರಗಿ| ಅತೀವೃಷ್ಟಿ ಪೀಡಿತ ಪ್ರದೇಶ ಘೋಷಿಸುವಂತೆ ಮಲ್ಲಿನಾಥ ನಾಗನಹಳ್ಳಿ ಆಗ್ರಹ

ಕಲಬುರಗಿ: ಕೋಟನೂರ್, ನಾಗನಹಳ್ಳಿ, ಉದನೂರು, ನಂದಿಕೂರ್, ಸೀತನೂರ್ ಹಾಗೂ ಕಲಬುರ್ಗಿ ದಕ್ಷಿಣ...

ಕಲಬುರಗಿ| ಮಳೆಯಿಂದ ಬೆಳೆ ನಷ್ಟ, ಬಾವಿಯಲ್ಲೇ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕಲಬುರಗಿ: ಜಿಲ್ಲೆಯಲ್ಲಿ ಸಾಲಬಾಧೆ ತಾಳಲಾರದೆ ರೈತ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ....