ಕಲಬುರಗಿ: ಸರಕಾರಿ ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Date:

Share post:

ಕಲಬುರಗಿ: ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕೆ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಬೆಂಗಳೂರು ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸರಕಾರಿ ನೌಕರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಬಸವರಾಜ ಬಳುಂಡಗಿ ತಿಳಿಸಿದ್ದಾರೆ.

ರಾಜ್ಯ ಸರಕಾರಿ ಅಧಿಕಾರಿಗಳು ಮತ್ತು ನೌಕರರು ತಮ್ಮ ಮಕ್ಕಳು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ಯಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕ ಪಡೆದವರು ಮೇ-31ರ ಒಳಗಾಗಿ ಆನ್‌ಲೈನ್ ಮೂಲಕ https://ksgeanews.blogspot.com ಅರ್ಜಿ ಸಲ್ಲಿಸಬೇಕೆಂದು ಕೋರಿದ್ದಾರೆ.

ಅರ್ಜಿ ಸಲ್ಲಿಸುವ ವಿದ್ಯಾರ್ಥಿಯ ತಂದೆ-ತಾಯಿ ಕರ್ನಾಟಕ ರಾಜ್ಯ ಸರಕಾರದ ಖಾಯಂ ನೌಕರರಾಗಿರಬೇಕು. ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಸಂಬಂಧಿಸಿದ ಜಿಲ್ಲಾ/ ತಾಲೂಕಾ ಶಾಖೆಯ ಅಧ್ಯಕ್ಷರ ರುಜು ಮೊಹರಿನೊಂದಿಗೆ ದೃಢೀಕರಿಸಿ ಆನ್‌ಲೈನ್‌ನಲ್ಲಿ ಅಪ್ಲೋಡ್ ಮಾಡಬೇಕೆಂದು ಅವರು ತಿಳಿಸಿದ್ದಾರೆ.

Share post:

spot_imgspot_img

Popular

More like this
Related

ಕಲಬುರಗಿ| ಸಾರಾಯಿ ಕುಡಿಯಲು ಹಣ ಕೊಡದಿದ್ದಕ್ಕೆ ಪತ್ನಿ ಕೊಲೆ; ಪತಿಗೆ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ

ಕಲಬುರಗಿ: ಸಾರಾಯಿ ಕುಡಿಯಲು ಹಣ ಕೋಡದಿದ್ದಕ್ಕೆ ಪತ್ನಿಯ ಮೇಲೆ ಹಲ್ಲೆ ನಡೆಸಿ,...

ಕಲಬುರಗಿ| ಹಲಕಟ್ಟಾ ಶರೀಫ್‍ನಲ್ಲಿ ಉರುಸ್-2025 ಪ್ರಯುಕ್ತ ವಿಶೇಷ ರೈಲು ಸಂಚಾರ 

ಕಲಬುರಗಿ: ಹಲಕಟ್ಟಾ ಶರೀಫನಲ್ಲಿ (ಉರ್ಸ್-ಎ-ಶರೀಫ್) ಉರುಸ್ 2025ರ ಪ್ರಯುಕ್ತ ಕೆಳಕಂಡ ದಿನಾಂಕಗಳಂದು...

ಕಲಬುರಗಿ| ರೈತರ ಒಗ್ಗಟ್ಟಿನಿಂದ ಹಕ್ಕು ಮತ್ತು ನ್ಯಾಯಕ್ಕಾಗಿ ಹೋರಾಟ: ಭೀಮಾಶಂಕರ ಮಾಡಿಯಾಳ

ಕಲಬುರಗಿ: ರೈತರ ಹಿತಾಸಕ್ತಿಗಳನ್ನು ಕಾಪಾಡಲು ಒಗ್ಗಟ್ಟಿನ ಬಲವನ್ನು ತಂದುಕೊಳ್ಳುವುದು ಇಂದಿನ ಅಗತ್ಯವಾಗಿದೆ....

ಕಲಬುರಗಿ| ಜುಲೈ ಮಾಸಾಂತ್ಯಕ್ಕೆ ಜಿಲ್ಲಾ ಕಸಾಪದಿಂದ ಯುವ ಸಾಹಿತ್ಯ ಸಮ್ಮೇಳನ: ವಿಜಯಕುಮಾರ ಪಾಟೀಲ ತೇಗಲತಿಪ್ಪಿ

ಕಲಬುರಗಿ : ಯುವ ಬರಹಗಾರರಿಗೆ ಸ್ಫೂರ್ತಿ ನೀಡಿ, ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ...